
ಪ್ರಗತಿವಾಹಿನಿ ಸುದ್ದಿ; ಹಾಸನ: ಒಂದುವರೆ ವರ್ಷದ ಹೆಣ್ಣುಮಗುವನ್ನು ಬಟ್ಟೆಯಲ್ಲಿ ಸುತ್ತಿ ಬೇಲಿ ಬದಿ ಎಸೆದು ಹೋಗಿರುವ ಹೃದಯ ವುದ್ರಾವಕ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ವಿದ್ಯಾನಗರ ಸಮೀಪದಲ್ಲಿ ನಡೆದಿದೆ.
ಮಗುವಿನ ಆಕ್ರಂದನ ಕೇಳಿ ಸ್ಥಳಕ್ಕೆ ಬಂದ ಸ್ಥಳೀಯ ನಿವಾಸಿ ತಮನ್ನಾ ಎಂಬುವವರು ಮಗುವನ್ನು ಕರೆತಂದು ಹಾಲುಣಿಸಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಬಂದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅಧಿಕಾರಿಗಳು ಮಗುವನ್ನು ವಶಕ್ಕೆ ಪಡೆದಿದ್ದು, ಪೋಷಕರ ಪತ್ತೆಗೆ ಮುಂದಾಗಿದ್ದಾರೆ.