Kannada NewsKarnataka NewsLatest

*ಅನಾರೋಗ್ಯಕ್ಕೆ ಬೇಸತ್ತ ಕಾನ್ಸ್ ಟೇಬಲ್: ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಮೂಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದ ಪೊಲೀಸ್ ಕಾನ್ಸ್ ಟೇಬಲ್ ಓರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯದಲ್ಲಿ ನಡೆದಿದೆ.

38 ವರ್ಷದ ನಟೇಶ್ ಆತ್ಮಹತ್ಯೆಗೆ ಶರಣಾದ ಕಾನ್ಸ್ ಟೇಬಲ್. ಅರಕಲಗೂಡು ತಾಲೂಕಿನ ಚಿಕ್ಕಬೊಮ್ಮನಹಳ್ಳಿ ಗ್ರಾಮದ ನಟೇಶ್, ಕೆಲ ದಿನಗಳ ಹಿಂದೆ ಹೆಡ್ ಕಾನ್ಸ್ ತೇಬಲ್ ಆಗಿ ಮುಂಬಡ್ತಿ ಪಡೆದಿದ್ದರು. ಹೊಳೆನರಸೀಪುರ ಠಾಣೆಗೆ ವರ್ಗಾವಣೆಗೊಂಡಿದ್ದರು.

Home add -Advt

ಆದರೆ ಕಳೆದ ಮೂರು ತಿಂಗಳಿಂದ ಮೂಳೆ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಒಂದು ವಾರದಿಂದ ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದವರು ನಿನ್ನೆ ಇದ್ದಕ್ಕಿದ್ದಂತೆ ಆಸ್ಪತ್ರೆಯಿಂದ ನಾಪತ್ತೆಯಾಗಿದ್ದರು. ಇಂದು ಹಾಸನ ಹೊರವಲಯದ ಗೆಂಡೆಕಟ್ಟೆ ಫಾರೆಸ್ಟ್ ಬಳಿ ಆತ್ಮಹತ್ಯೆಗೆ ಶರಣಾಗಿದಾರೆ.

ಹಾಸನ ಬಡಾವಣೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button