Kannada NewsKarnataka NewsLatestPolitics

*ಕಿಡ್ನ್ಯಾಪ್ ಆಗಿದ್ದ ಶಿಕ್ಷಕಿ ರಕ್ಷಣೆ; ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಮಂಗಳೂರು: ಹಾಸನದಲ್ಲಿ ದುಷ್ಕರ್ಮಿಗಳಿಂದ ಅಪಹರಣಕ್ಕೊಳಗಾಗಿದ್ದ ಶಾಲಾ ಶಿಕ್ಷಕಿಯನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಕ್ಷಿಸಲಾಗಿದೆ.

ಹಾಸನದ ಬಿಟ್ಟಗೌಡನಹಳ್ಳಿಯಲ್ಲಿ ಇಂದು ಬೆಳಿಗ್ಗೆ ಶಾಲೆಯ ಮುಂಭಾಗವೇ ಶಿಕ್ಷಕಿಯನ್ನು ದುಷ್ಕರ್ಮಿಗಳು ಕಿಡ್ನ್ಯಾಪ್ ಮಾಡಿ ಕಾರಿನಲ್ಲಿ ಹೊತ್ತೊಯ್ದಿದ್ದರು. ಅರ್ಪಿತಾ ಅಪಹರಣಕ್ಕೊಳಗಾದ ಶಿಕ್ಷಕಿ. ಶಿಕ್ಷಕಿಯನ್ನು ಕಿಡ್ನ್ಯಾಪ್ ಮಾಡಿದ್ದ ದೃಶ್ಯ ಸಿಸಿಟಿಯಲ್ಲಿ ಸೆರೆಯಾಗಿತ್ತು.

ಮದುವೆಗೆ ಒಪ್ಪಲಿಲ್ಲ ಎಂಬ ಕಾರಣಕ್ಕೆ ಸಂಬಂಧಿಕನೇ ಆದ ರಾಮು ಎಂಬಾತ ತನ್ನ ಸಹಚರರೊಂದಿಗೆ ಸೇರಿ ಶಿಕ್ಷಕಿ ಅರ್ಪಿತಾ ಅವರನ್ನು ಅಪಹರಿಸಿದ್ದ. 15 ದಿನಗಳ ಹಿಂದೆ ಮನೆಗೆ ಬಂದು ಅರ್ಪಿತಾಳನ್ನು ಮದುವೆ ಮಾಡಿಕೊಡುವಂತೆ ಕೇಳಿದ್ದ. ಇದಕ್ಕೆ ಅರ್ಪಿತಾ ಹಾಗೂ ಪೋಷಕರು ಒಪ್ಪಿರಲಿಲ್ಲ. ಮದುವೆಗೆ ಒಪ್ಪದ ಕಾರಣಕ್ಕೆ ರಾಮುನೇ ಅರ್ಪಿತಾಳನ್ನು ಅಪಹರಿಸಿರಬಹುದು ಎಂದು ಪೋಷಕರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಆರೋಪಿಗಳ ಪತ್ತೆಗಾಗಿ ಹಾಸನ ಎಸ್ ಪಿ ಮೂರು ಪೊಲೀಸ್ ತಂದ ರಚಿಸಿದ್ದರು. ಇದೀಗ ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಯಾಡಿ ಬಳಿ ಶಿಕ್ಷಕಿ ಅರ್ಪಿತಾರನ್ನು ಪೊಲೀಸರು ರಕ್ಷಿಸಿದ್ದು, ರಾಮು ಹಾಗೂ ಗ್ಯಾಂಗ್ ನ್ನು ಬಂಧಿಸಿದ್ದಾರೆ.

Home add -Advt


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button