*ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಕಾನ್ಸ್ ಟೇಬಲ್ ಓರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯ ಸಕಲೇಶಪುರದಲ್ಲಿ ನಡೆದಿದೆ. ಸೋಮಶೇಖರ್ (39) ಮೃತ ದುರ್ದೈವಿ, ಪೊಲೀಸ್ ಕ್ವಾರ್ಟರ್ಸ್ ನಲ್ಲಿಯೇ ನೇಣಿಗೆ ಕೊರಳೊಡ್ಡಿದ್ದಾರೆ. ಸಕಲೇಶಪುರದಲ್ಲಿ 112 ಪೊಲೀಸ್ ವಾಹನ ಚಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಸೋಮಶೇಖರ್ ವಿರುದ್ಧ ಪತ್ನಿ ಕಿರುಕುಳ ಆರೋಪ ಮಾಡಿ ಡಿವೈಎಸ್ ಪಿಗೆ ದೂರು ನೀಡಿದ್ದಳು ಎನ್ನಲಾಗಿದೆ. ಇದರಿಂದ ಬೇಸರಗೊಂಡು ಸೋಮಶೇಖರ್ ಆತ್ಮಹತ್ಯೆ ಮಾಡಿಕೊಂಡಿರಬಹುದು ಎನ್ನಲಾಗಿದೆ. ಸಕಲೇಶಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Home add -Advt *ನಿರ್ಮಾಣ … Continue reading *ಪೊಲೀಸ್ ಕಾನ್ಸ್ ಟೇಬಲ್ ಆತ್ಮಹತ್ಯೆಗೆ ಶರಣು*