National

ಹೆಣಗಳ ರಾಶಿ ಕಂಡು ಆಘಾತ: ಕಾನ್ಸ್ ಟೇಬಲ್ ಹೃದಯಾಘಾತದಿಂದ ಸಾವು

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದಿದ್ದ ಸತ್ಸಂಗ ಧಾರ್ಮಿಕ ಕಾರ್ಯಕ್ರಮದ ವೇಳೆ ಕಾಲ್ತುಳಿತ ಸಂಭವಿಸಿ 116 ಜನರು ಸಾವನ್ನಪ್ಪಿದ್ದು, ಘಟನಾ ಸ್ಥಳದಲ್ಲಿನ ಹೆಣಗಳ ರಾಶಿ ಕಂಡು ಪೊಲೀಸ್ ಪೇದೆಯೊಬ್ಬರು ಹೃದಯಾಘಾತದಿಂದಸಾವನ್ನಪ್ಪಿರುವ ಘಟನೆ ನಡೆದಿದೆ.

ಹತ್ರಾಸ್ ನ ಪುಲ್ರೈ ಗ್ರಾಮದಲ್ಲಿ ಭೋಲೆ ಬಾಬಾ ಸತ್ಸಂಗ ಕಾರ್ಯಕ್ರಮ ಆಯೋಜಿಸಲಾಗಿತ್ತು. ಈ ವೇಳೆ ಏಕಾಏಕಿ ಕಾಲ್ತುಳಿತ ಸಂಭವಿಸಿ 116 ಜನರು ಮೃತಪಟ್ಟಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ.

ರಾಶಿ ರಾಶಿ ಹೆಣಗಳನ್ನು ಕಂಡು ಆಘಾತಕ್ಕೊಳಗಾದ ಡ್ಯೂಟಿಯಲ್ಲಿದ್ದ ಕಾನ್ಸ್ ಟೇಬಲ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಜನೀಶ್ ಮೃತ ಪೊಲೀಸ್ ಪೇದೆ. ಇಆಹ್ ಜಿಲ್ಲಾ ಆಸ್ಪತ್ರೆಯಲ್ಲಿ ಬಿದ್ದಿದ್ದ ಹೆಣಗಳ ರಾಶಿ ಕಂಡು ಶಾಕ್ ಆಗಿದ್ದಾರೆ. ಈ ವೇಳೆ ತೀವ್ರ ಹೃದಯಾಘಾತಕ್ಕೊಳಗಾದ ರಜನೀಶ್ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

Home add -Advt

ಕರ್ತವ್ಯದಲ್ಲಿದ್ದ ರಜನೀಶ್ ಅವಘರ್ ನಲ್ಲಿ ಕ್ವಿಕ್ ರೆಸ್ಪಾನ್ಸ್ ಟೀಮ್ ಭಾಗವಾಗಿದ್ದರು. ತುರ್ತು ಕರ್ತವ್ಯಕ್ಕಾಗಿ ಅವರನ್ನು ಆಸ್ಪತ್ರೆಗೆ ಕರೆಸಲಾಗಿತ್ತು. ಆದರೆ ಅಲ್ಲಿದ್ದ ಹೆಣಗಳ ರಾಶಿ ಹಾಗೂ ಗೋಳಾಡುತ್ತಿರುವ ದೃಶ್ಯಕಂಡು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button