*ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ ಪ್ರಕರಣ: ಸಾವಿನ ಸಂಖ್ಯೆ 107ಕ್ಕೆ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಉತ್ತರ ಪ್ರದೆಶದ ಹತ್ರಾಸ್ ನಲ್ಲಿ ನಡೆದ ಕಾಲ್ತುಳಿತ ಪ್ರಕರಣದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಏರುತ್ತಲೇ ಇದ್ದು, ಈವರೆಗೆ 107 ಜನ ಸಾವನ್ನಪ್ಪಿದ್ದಾರೆ. ಹತ್ರಾಸ್ ಜಿಲ್ಲೆಯ ಸಿಕಂದ್ರ ರಾವು ಪ್ರದೇಶದ ರಾತಿ ಭನ್ ಪುರ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಸತ್ಸಂಗ ಕಾರ್ಯಕ್ರಮದಲ್ಲಿ ಏಕಾಏಕಿ ಕಾಲ್ತುಳಿತವುಂಟಾಗಿ ಈ ದುರಂತ ಸಂಭವಿಸಿದೆ. ಹೆಚ್ಚಿನ ಜನರು ಸತ್ಸಂಗದಲ್ಲಿ ಭಾಗವಹಿಸಿದ್ದರಿಂದ ಉಸಿರುಗಟ್ಟಿಸುವ ವಾತಾವರಣ ನಿರ್ಮಾಣವಾಗಿ ಹಲವರು ಅಸ್ವಸ್ಥತೆಯಿಂದ ಹೊರಗೆ ಓಡಲಾರಂಭಿಸಿದ್ದಾರೆ. ಈ ವೇಳೆ ನೂಕುನುಗ್ಗಲು ಉಂಟಾಗಿ ಕಾಲ್ತುಳಿತ ಸಂಭವಿಸಿದೆ ಎನ್ನಲಾಗುತ್ತಿದೆ. ಭೋಲೆ ಬಾಬಾ ಸತ್ಸಂಗ … Continue reading *ಸತ್ಸಂಗ ಕಾರ್ಯಕ್ರಮದಲ್ಲಿ ಕಾಲ್ತುಳಿತ ಪ್ರಕರಣ: ಸಾವಿನ ಸಂಖ್ಯೆ 107ಕ್ಕೆ ಏರಿಕೆ*