Kannada NewsKarnataka NewsNational

*ಹತ್ರಾಸ್‌ ಕಾಲ್ತುಳಿತ ಪ್ರಕರಣ: 6 ಜನರ ಬಂಧನ*

ಪ್ರಗತಿವಾಹಿನಿ ಸುದ್ದಿ: 121 ಜನರ ಸಾವಿಗೆ ಕಾರಣವಾದ ಉತ್ತರ ಪ್ರದೇಶದ ಹತ್ರಾಸ್‌ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಜನರನ್ನು ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ಗುರುವಾರ ತಿಳಿಸಿದ್ದಾರೆ. ಬಂಧಿತರೆಲ್ಲರೂ ದುರ್ಘಟನೆಗೂ ಮುನ್ನ ಸ್ಥಳದಲ್ಲಿ ಸತ್ಸಂಗವನ್ನು ನಡೆಸಿದ ಸಂಘಟನಾ ಸಮಿತಿಯ ಸದಸ್ಯರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಮಂಗಳವಾರ ಹತ್ರಾಸ್‌ನಲ್ಲಿ ಸ್ವಯಂಘೋಷಿತ ದೇವಮಾನವ ಬಾಬಾ ಭೋಲೆ ಅವರ ಸತ್ಸಂಗದಲ್ಲಿ ನಡೆದ ಕಾಲ್ತುಳಿತದಲ್ಲಿ ಒಟ್ಟು 121 ಜನರು ಸಾವನ್ನಪ್ಪಿದ್ದಾರೆ. ಮೃತಪಟ್ಟವರ ಪೈಕಿ ಹೆಚ್ಚಿನವರು ಮಹಿಳೆಯರಾಗಿದ್ದಾರೆ. ಇನ್ನೂ 31 ಮಂದಿ ಗಾಯಗೊಂಡಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ನಾಲ್ವರು ಪುರುಷರು ಮತ್ತು ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿಯನ್ನು ಬಂಧಿಸಲಾಗಿದೆ. ಅವರೆಲ್ಲರೂ ಸಂಘಟನಾ ಸಮಿತಿಯ ಸದಸ್ಯರಾಗಿದ್ದು, ಸೇವಾದಾರರಾಗಿ ಕೆಲಸ ಮಾಡುತ್ತಿದ್ದರು ಎಂದು ಅಲಿಗಢ್ ಇನ್ಸ್‌ಪೆಕ್ಟರ್ ಜನರಲ್ ಶಲಭ್ ಮಾಥುರ್ ಹೇಳಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button