Belagavi NewsBelgaum NewsKannada NewsKarnataka NewsLatest
*ಬೆಳಗಾವಿಯಲ್ಲಿ ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಕಲ್ಲು ತೂರಾಟ: 6 ಜನರು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಹತ್ತರಗಿ ಕ್ರಾಸ್ ನಲ್ಲಿ ನಡೆದಿದ್ದ ಕಬ್ಬು ಬೆಳೆಗಾರರ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆಸಿದ್ದ ಪ್ರಕರಣದಲ್ಲಿ 6 ಜನರನ್ನು ಬಂಧಿಸಲಾಗಿದೆ.
ಕಬ್ಬು ಬೆಳೆಗೆ 3500 ರೂಪಾಯಿ ಬೆಲೆ ನಿಗದಿಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹತ್ತರಗಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ದಿನಗಳ ಹಿಂದೆ ರೈತರು ನಡೆಸಿದ್ದ ಪ್ರತಿಭಟನೆ ವೇಳೆ ಕಲ್ಲು ತೂರಾಟ ನಡೆದಿತ್ತು. ಘಟನೆಯಲ್ಲಿ 12 ಪೊಲೀಸರು ಗಾಯಗೊಂಡಿದ್ದರು. ಹಲವು ವಾಹನಗಳು ಜಖಂಗೊಂಡಿದ್ದವು. ಈ ಬಗ್ಗೆ ಯಮಕನಮರಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಕಲ್ಲು ತೂರಾಟ ಕೇಸ್ ನಲ್ಲಿ 6 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಹುಕ್ಕೇರಿ ತಾಲೂಕಿನ ಹೆಬ್ಬಾಳದ ಚನ್ನಗೌಡ ಸಸಾಲಟ್ಟಿ, ಪ್ರಶಾಂತ ಮುಗಳಿ, ವಿನಾಯಕ ಕೋಟಾವಾಲಿ, ಉಳ್ಳಾಗಡ್ಡಿ, ಖಾನಾಪುರದ ಮಲ್ಲಪ್ಪ ಘಟಗಿ, ಕಾಕತಿಯ ಶಿವಪ್ಪ ವಾಣಿ, ಬಿದ್ರೆವಾಡಿಯ ಸೋಮನಾಥ ಹಿರೇಮಠ ಎಂದು ಗುರುತಿಸಲಾಗಿದೆ.




