Kannada NewsKarnataka NewsLatest

*BREAKING: ಹತ್ತರಗಿಯಲ್ಲಿ ಕಲ್ಲು ತೂರಾಟ ಕೇಸ್: 11 ಜನರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ: ಕಬ್ಬು ಬೆಳೆಗಾರರು ಬೆಳಗಾವಿಯ ಹತ್ತರಗಿಯಲ್ಲಿ ನಡೆಸುತ್ತಿದ್ದ ಪ್ರತಿಭಟನೆಯ ವೇಳೆ ಕಲ್ಲು ತೂರಾಟ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಪಿಎಸ್ಐ ಆರ್.ವಿ.ಪಾಟೀಲ್ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರತಿಭಟನೆಯ ವೇಳೆ ಪೊಲೀಸರನ್ನು ಕೊಲೆ ಮಾಡುವ ಉದ್ದೇಶದಿಂದ ಕಲ್ಲು ತೂರಾಟ ನಡೆಸಿ, ಪೊಲೀಸರನ್ನು ಒದ್ದು ಹಲ್ಲೆ ನಡೆಸಲಾಗಿದೆ. ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಯುಂಟು ಮಾಡಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

Home add -Advt

ಈ ಹಿನ್ನೆಲೆಯಲ್ಲಿ ಯಮಕನಮರಡಿ ಠಾಣೆಯಲ್ಲಿ 11 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ.

Related Articles

Back to top button