*86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ; ಒಂದು ದಿನದ ವೇತನ ನೀಡುವಂತೆ ಜಿಲ್ಲಾ ಪೊಲೀಸ್ ಸಿಬ್ಬಂದಿಗೆ ಮನವಿ*
ಪ್ರಗತಿವಾಹಿನಿ ಸುದ್ದಿ; ಹಾವೇರಿ: ಹಾವೇರಿಯಲ್ಲಿ ಈ ಬಾರಿ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜಿಸಲಾಗಿದ್ದು, ಸಮ್ಮೇಳನಕ್ಕೆ ಜಿಲ್ಲಾ ಪೊಲೀಸ್ ಸಿಬ್ಬಂದಿಯ ಒಂದು ದಿನದ ವೇತನ ನೀಡುವಂತೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಮಹೇಶ ಜೋಶಿ ಪತ್ರ ಬರೆದಿದ್ದಾರೆ.
ಜನವರಿ 6, 7 ಹಾಗೂ 8ರಂದು ಹಾವೇರಿಯಲ್ಲಿ ‘ಸಾಮರಸ್ಯದ ಭಾವ ಕನ್ನಡದ ಜೀವ’ ಎಂಬ ಧ್ಯೇಯದೊಂದಿಗೆ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಜಿಲ್ಲಾ ಎಸ್ ಪಿ ಹನುಮಂತರಾಯ ಅವರಿಗೆ ಪತ್ರ ಬರೆದಿರುವ ಕಸಾಪ ಅಧ್ಯಕ್ಷ ಮಹೇಶ ಜೋಶಿ, ಜಿಲ್ಲಾ ಪೊಲೀಸ್ ಸಿಬ್ಬಂದಿಗಳ ಒಂದು ದಿನದ ವೇತನ ನೀಡುವಂತೆ ಮನವಿ ಮಾಡಿದ್ದಾರೆ.
ಈ ನಡುವೆ ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಅಧಿಕೃತವಾಗಿ ಬಿಡುಗಡೆಯಾಗುವ ಮುನ್ನವೇ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕನ್ನಡದ ಅತಿದೊಡ್ಡ ಕಾರ್ಯಕ್ರಮ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಸೋರಿಕೆಯಾಗಿದ್ದರೂ ಸಾಹಿತ್ಯ ಪರಿಷತ್ ಮೌನ ವಹಿಸಿರುವುದು ಆಕ್ರೋಶಕ್ಕೆ ಕಾರಣವಾಗಿದೆ.
ಜನವರಿ 6, 7 ಹಾಗೂ 8ರಂದು ಹಾವೇರಿ ನಗರದ ಅಜ್ಜಯ್ಯನ ಗದ್ದುಗೆ ಬಳಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಜಾಗ ಅಂತಿಮಗೊಳಿಸಲಾಗಿದೆ. ಕಾರ್ಯಕ್ರಮಕ್ಕೆ ಭರ್ಜರಿ ಸಿದ್ಧತೆ ನಡೆದಿದೆ.
https://pragati.taskdun.com/prisonersuicidejailudupi/
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ