Karnataka News

*ಲಂಚಕ್ಕೆ ಕೈಯೊಡ್ಡಿದ್ದ ಬಿಇಒ ಲೋಕಾಯುಕ್ತ ಬಲೆಗೆ*

ಪ್ರಗತಿವಾಹಿನಿ ಸುದ್ದಿ: ಶಿಕ್ಷಕರೊಬ್ಬರ ಅಮಾನತು ಆದೇಶ ಹಿಂಪಡೆಯಲು ಲಂಚಕ್ಕೆ ಬೇದಿಕೆ ಇಟ್ಟಿದ್ದ ಕ್ಷೇತ್ರ ಶಿಕ್ಷಣಾಧಿಕಾರಿಯೊಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಹಾವೇರಿ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಮೌನೇಶ್ ಲೋಕಾಯುಕ್ತ ಬಲೆಗೆ ಬಿದ್ದವರು. ಶಿಕ್ಷಕರೊಬ್ಬರ ಅಮಾನತು ಆದೇಶ ಹಿಂಪಡೆಯಲು 50 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ನೊಂದ ಶಿಕ್ಷಕ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು.

ಮುಂಗಡವಾಗಿ 15 ಸಾವಿರ ಹಣ ಪಡೆಯುತ್ತಿದ್ದಾಗ ಪಕ್ಕಾ ಪ್ಲಾನ್ ಮಾಡಿ ಲೋಕಾಯುಕ್ತ ಪೊಲೀಸರು ಬಿಇಒ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button