
ಪ್ರಗತಿವಾಹಿನಿ ಸುದ್ದಿ; ಹಾವೇರಿ: ಬೈಕ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಛತ್ರ ಗ್ರಾಮದಲ್ಲಿ ನಡೆದಿದೆ.
ಒಂದು ವಾಹನವನ್ನು ಓವರ್ ಟೇಕ್ ಮಾಡಲು ಹೋಗಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಬೈಕ್ ಸವಾರರ ಮೇಲೆಯೇ ಟ್ರಕ್ ಹರಿದು ಹೋಗಿದೆ. ಬೈಕ್ ಸವಾರರಿಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಶಿಗ್ಗಾಂವಿ ತಾಲುಕಿನ ಚಾಕಾಪುರ ಗ್ರಾಮದ ನಿಂಗಪ್ಪ (40) ಶರೀಫ್ (45) ಮೃತರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ