Karnataka NewsLatest

*ಚರಂಡಿ ನೀರಲ್ಲಿ ಕೊಚ್ಚಿ ಹೋದ ಬಾಲಕ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಿದ್ದು, ಅವಾಂತರಗಳು ಸೃಷ್ಟಿಯಾಗಿವೆ. ಹಾವೇರಿಯಲ್ಲಿ ಸುರಿದ ಭಾರಿ ಮಳೆಗೆ ಚರಂಡಿ ನೀರಲ್ಲಿ ಬಾಲಕ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.

Home add -Advt

ರಸ್ತೆ ಮೇಲೆ ಚರಂಡಿ ನೀರು ಹರಿಯುತ್ತಿದ್ದು, ರಸ್ತೆ ಕಾಣದೇ 12 ವರ್ಷದ ಬಾಲಕನೊಬ್ಬ ಚರಂಡಿ ನೀರಿನಲ್ಲಿ ಕೊಚ್ಚಿ ಹೋಗಿದ್ದಾನೆ. ಹಾವೇರಿ ಎಸ್ ಪಿ ಕಚೇರಿ ಮುಂಭಾಗವೇ ಈ ಘಟನೆ ನಡೆದಿದೆ. 12 ವರ್ಷದ ನಿವೇದನ್ ಬಸವರಾಜ್ ಚರಂಡಿ ನೀರಿನಲ್ಲಿ ಕೊಚ್ಚಿ ಹೋದ ಬಾಲಕ. ರಸ್ತೆ ಮೇಲೆ ಚರಂಡಿ ನೀರು ಹೊಳೆಯಂತೆ ಹರಿಯುತ್ತಿತ್ತು. ರಸ್ತೆಯಲ್ಲಿ ನಡೆದು ಹೋಗುತ್ತಿದ್ದ ಬಾಲಕ ಕಾಲಿಡುತ್ತಿದ್ದಂತೆ ಚರಂಡಿಯೊಳಗೇ ಬಿದ್ದು ಕೊಚ್ಚಿ ಹೋಗಿದ್ದಾನೆ.

ಘಟಾನಾ ಸ್ಥಳಕ್ಕೆ ನಗರಸಭೆ ಅಧಿಕಾರಿಗಳು, ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಆಗಮಿಸಿದ್ದು, ಚರಂಡಿ ನೀರಲ್ಲಿ ಕೊಚ್ಚಿ ಹೋದ ಬಾಲಕನಿಗಾಗಿ ಶೋಧ ನಡೆಸಲಾಗುತ್ತಿದೆ.


Related Articles

Back to top button