
ಪ್ರಗತಿವಾಹಿನಿ ಸುದ್ದಿ: ರಸ್ತೆ ವಿಭಜಕಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಸ್ವಾಮೀಜಿ ಸೇರಿ ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಬೆಂಗಳೂರಿನ ಬಸವನಗುಡಿಯ ಉತ್ತರಾಧಿಮಠದ ಸತ್ಯಾತ್ಮತೀರ್ಥ ಸ್ವಾಮೀಜಿ ಸೇರಿ ಮೂವರಿಗೆ ಗಾಯಗಳಾಗಿವೆ.
ಗಾಯಾಳುಗಳನ್ನು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಧಾರವಾಡದಿಂದ ಸವಣೂರಿನ ಸತ್ಯಬೋಧ ಮಠಕ್ಕೆ ತೆರಳುವಾಗ ಈ ಅಪಘಾತ ಸಂಭವಿಸಿದೆ. ತಡಸ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ


