Latest

ಕೊರೊನಾ ಸೋಂಕಿಗೆ ಬಲಿಯಾದ ಸಾಹಿತಿ

ಪ್ರಗತಿವಾಹಿನಿ ಸುದ್ದಿ; ಹಾವೇರಿ: ಕೊರೊನಾ ಸೋಂಕಿನಿಂದಾಗಿ ಮಹಿಳಾ ಸಾಹಿತಿಯೋರ್ವರು ಬಲಿಯಾಗಿರುವ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ. ಕೊರೊನಾದಿಂದ ಸಾಹಿತಿ ಸಾವನ್ನಪ್ಪಿದ್ದರಿಂದ ಅಂತ್ಯಕ್ರಿಯೆಗೆ ಸ್ಥಳೀಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಕೊರೊನಾ ಸೋಂಕಿನಿಂದ ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದ ಮಹಿಳಾ ಸಾಹಿತಿ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದರು. ಮೆಡ್ಲೇರಿ ರಸ್ತೆಯಲ್ಲಿರುವ ಸರ್ಕಾರಿ ಜಮೀನಿನಲ್ಲಿ ಅಂತ್ಯಕ್ರಿಯೆಗೆ ಜಿಲ್ಲಾಡಳಿತ ವ್ಯವಸ್ಥೆ ಮಾಡಿತ್ತು. ಇದರಿಂದ ಆಕ್ರೋಶಗೊಂಡಿರುವ ಸ್ಥಳೀಯರು ಜಮೀನಿನಲ್ಲಿ ಅಂತ್ಯಕ್ರಿಯೆಗೆ ವಿರೋಧ ವ್ಯಕ್ತಪಡಿಸಿದ್ದಾರೆ.

Home add -Advt

ಸ್ಥಳೀಯರ ವಿರೋಧದ ಹಿನ್ನೆಲೆಯಲ್ಲಿ ಮೃತದೇಹವನ್ನು ಒಂದು ಗಂಟೆಯಿಂದ ಅಂಬ್ಯುಲೆನ್ಸ್ ವಾಹನದಲ್ಲೇ ಇಟ್ಟುಕೊಂಡು ಆರೋಗ್ಯ ಇಲಾಖೆ ಸಿಬ್ಬಂದಿ ಕಾಯುತ್ತಿದ್ದಾರೆ. ಮಾಸ್ಕ್ ಧರಿಸದೆ, ದೈಹಿಕ ಅಂತರ ಕಾಯ್ದುಕೊಳ್ಳದೆ ವಿರೋಧ ಮಾಡುತ್ತಿದ್ದ ಸ್ಥಳೀಯರಿಗೆ ಪೊಲೀಸರು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಣೆಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

Related Articles

Back to top button