ಪ್ರಗತಿವಾಹಿನಿ ಸುದ್ದಿ; ಹಾವೇರಿ: ಕೆ.ಎಸ್.ಆರ್.ಟಿ.ಸಿ ಕಂಡಕ್ಟರ್ ಒಬ್ಬರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಎ.ಬಿ.ಮನೋಜ್ ಕುಮಾರ್ ಆತ್ಮಹತ್ಯೆಗೆ ಯತ್ನಿಸಿದ ಕಂಡಕ್ಟರ್. ಸಾರ್ವಜನಿಕರಿಗೆ ಫೋನ್ ನಂಬರ್ ನೀಡಿದ್ದಕ್ಕಾಗಿ ನನ್ನನ್ನು ಡಿಪೋ ಮ್ಯಾನೇಜರ್ ಮಂಜುನಾಥ್ ಕಡ್ಲಿಕೊಪ್ಪ ಅಮಾನತು ಮಾಡಿದ್ದಾರೆ. ಇದರಿಂದ ಅವಮಾನವಾಗಿದೆ ಎಂದು ಆರೋಪಿಸಿ ಮನೋಜ್ ಕುಮಾರ್ ವಿಷ ಸೇವಿಸಿದ್ದಾರೆ.
ಅಸ್ವಸ್ಥಗೊಂಡಿರುವ ಮನೋಜ್ ಕುಮಾರ್ ನನ್ನು ಬ್ಯಾಡಗಿ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಕಂಡಕ್ಟರ್ ಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ