Latest

*ರಾಜ್ಯಕ್ಕೆ ಮುಂಗಾರು ಎಂಟ್ರಿ: ಗುಡುಗು ಸಹಿತ ಭಾರಿ ಮಳೆ; ರೈತರಲ್ಲಿ ಮೂಡಿದ ಮಂದಹಾಸ*

ಪ್ರಗತಿವಾಹಿನಿ ಸುದ್ದಿ: ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ. ಹವಾಮಾನ ಇಲಾಖೆ ಮುನ್ಸೂಚನೆಯಂತೆಯೇ ಮುಂಗಾರು ಆಗಮನವಾಗಿದ್ದು, ರೈತರ ಮೊಗದಲ್ಲಿ ಮಂದಹಾಸ ಮೂಡಿದೆ. ಕೃಷೀ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಲು ಸಿದ್ಧತೆ ಬರದಿಂದ ಸಾಗಿದೆ.

Home add -Advt

ನಾಳೆಯಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ ಜೋರಾಗಲಿದೆ ಎಂದು ಹೇಳಲಾಗಿತ್ತು. ಆದರೆ ಜೂನ್ 1ರಿಂದಲೇ ಮುಂಗಾರು ಮಳೆ ಆರಂಭವಾಗಿದ್ದು, ರಾಜಧಾನಿ ಬೆಂಗಳೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ ಸೇರಿದಂತೆ ಹಲವೆಡೆ ಗುಡುಗು, ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದೆ.

ಇನ್ನು ಜೂನ್ 2ರಿಂದ 7ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಹಾಗೂ ದಕ್ಷಿಣ ಒಳನಡಿನ ಹಲವು ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳುರು, ಚಿಕ್ಕಬಳ್ಲಾಪುರ, ಮಂಡ್ಯ, ಮೈಸೂರು, ಕೊಡಗು,ರಾಮನಗರ ಜಿಲ್ಲೆಗಳಲ್ಲಿ ಜೂ 3ರಿಂದ ಎರಡು ದಿನ ಧಾರಾಕಾರ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಒಂದೆರಡು ದಿನ ಹಗುರದಿಂದ ಸಾಧಾರಣ ಮಳೆಯಾಗಲಿದ್ದು, ಬಳಿಕ ಮಳೆಯ ಪ್ರಮಾಣ ಹೆಚ್ಚಲಿದೆ. ಒಟ್ಟಾರೆ ರಾಜ್ಯದಲ್ಲಿ ಮುಂಗಾರು ಮಳೆ ಆರಂಭವಾಗಿದ್ದು, ಈ ಬಾರಿ ಮುಂಗಾರು ಉತ್ತಮವಾಗಿರಲಿದೆ ಎಂದು ನಿರೀಕ್ಷಿಸಲಾಗಿದೆ.


Related Articles

Back to top button