Karnataka News

*ಲೋಕಾಯುಕ್ತ ದಾಳಿ ವೇಳೆ 9 ಲಕ್ಷ ರೂ. ಹಣದ ಗಂಟನ್ನು ಕಿಟಕಿಯಿಂದ ಎಸೆದ ಇಂಜಿನಿಯರ್*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಅಕ್ರಮವಾಗಿ ಆಸ್ತಿ ಗಳಿಕೆ ಆರೋಪದಡಿ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ನಗರ, ಹಾವೇರಿ ನಗರದಲ್ಲಿ ಇಬ್ಬರು ಅಧಿಕಾರಿಗಳ ಮನೆ ಮೇಲೆ ಲೋಕಾಯುಕ್ತ ರೇಡ್ ಆಗಿದೆ.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀನಿವಾಸ್ ಮನೆ ಮೇಲೆ ದಾಳಿ ನಡೆಸಲಾಗಿದೆ. ಇನ್ನೊಂದೆಡೆ ರಾಜ್ಯ ಪಂಚಾಯತ್ ಇಂಜಿನಿಯರಿಂಗ್ ಸಹಾಯಕ ಇಂಜಿನಿಯರ್ ಕಾಶಿನಾಥ್ ಭಜಂತ್ರಿ ಮನೆ ಮೇಲೆ ದಾಳಿ ನಡೆದಿದೆ.

ಇಬ್ಬರು ಅಧಿಕಾರಿಗಳಿಗೆ ಸೇರಿದ ನಾಲ್ಕು ಮನೆಗಳು, ಫಾರ್ಮ ಹೌಸ್, ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ.

ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಲೋಕಾಯುಕ್ತ ದಾಳಿ ವೇಳೆ ಕಾಶಿನಾಥ್ ಭಜಂತ್ರಿ 9 ಲಕ್ಷ ರೂಪಾಯಿ ಹಣದ ಗಂಟನ್ನು ಕಿಡಕಿಯಿಂದ ಹೊರಗೆ ಬಿಸಾಕಿದ್ದಾರೆ. ಇನ್ನಷ್ಟು ಹಣವನ್ನು ಬೆಡ್ ಅಡಿಯಲ್ಲಿ ಅಡಗಿಸಿಟ್ಟಿದ್ದಾರೆ. ಈ ಎಲ್ಲಾ ಹಣವನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

Home add -Advt


Related Articles

Back to top button