Kannada NewsKarnataka NewsLatest
*ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ; 7 ಆರೋಪಿಗಳು ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಹಾವೇರಿಯಲ್ಲಿ ಮತ್ತೊಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದ್ದು, 7 ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಹಾವೇರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್ ತಿಳಿಸಿದ್ದಾರೆ.
ಹಾವೇರಿ ಜಿಲ್ಲೆಯ ಹಾನಗಲ್ ನಲ್ಲಿ ನೈತಿಕ ಪೊಲೀಸ್ ಗಿರಿ, ಗ್ಯಾಂಗ್ ರೇಪ್ ಮಾಸುವ ಮುನ್ನವೇ ನಿನ್ನೆ ಬ್ಯಾಡಗಿಯ ಶಿವ ದೇವಸ್ಥಾನದ ಬಳಿ ನೈತಿಕ ಪೊಲೀಸ್ ಗಿರಿ ನಡೆಸಲಾಗಿದೆ.
ಅನ್ಯಕೋಮಿನ ಯುವಕ, ಯುವತಿ ಮೇಲೆ ಹಲ್ಲೆ ನಡೆಸಲಾಗಿದೆ. 9 ಮುಸ್ಲಿಂ ಯುವಕರ ಗ್ಯಾಂಗ್ ನಿಂದ ನೈತಿಕ ಪೊಲೀಸ್ ಗಿರಿ ನಡೆದಿದೆ. ಪ್ರಕರಣ ಸಂಬಂಧ 7 ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದ ಇಬ್ಬರು ಆರೋಪಿಗಳಿಗೆ ಹುಡುಕಾಟ ನಡೆಸಲಾಗಿದೆ. ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ವಹಿಸಲಾಗಿದೆ ಎಂದು ತಿಳಿಸಿದ್ದಾರೆ.




