
ಪ್ರಗತಿವಾಹಿನಿ ಸುದ್ದಿ; ಹಾವೇರಿ: ಎರಡನೇ ಬಾರಿ ಮುಖ್ಯಮಂತ್ರಿಯಾದ ಬಳಿಕ ಮೊದಲ ಬಾರಿಗೆ ಹಾವೇರಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕರಿಸಿದರು.
ಹಾವೇರಿಗೆ ಎಂಟ್ರಿ ಆಗುತ್ತಿದ್ದಂತೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆಗೆ ಜಿಲ್ಲಾ ಸರ್ಜನ್ ರನ್ನು ತೀವ್ರವಾಗಿ ಪ್ರಶ್ನಿಸಿದರು.
ವಾರ್ಡ್ ಗಳು ಮಳೆ ನೀರಿಗೆ ಸೋರಿಕೆ ಆಗುತ್ತಿದ್ದರೂ ಕ್ರಮ ಕೈಗೊಳ್ಳದ ಕಾರಣಕ್ಕೆ ಆರೋಗ್ಯ ಇಲಾಖೆ ಕಾಮಗಾರಿ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ( AEE) ಮಂಜುನಾಥ್ ಅವರನ್ನು ಸ್ಥಳದಲ್ಲೇ ಅಮಾನತು ಮಾಡಿ ಆದೇಶಿಸಲಾಯಿತು.

ಸಾರ್ವಜನಿಕ ಅಹವಾಲು ಸ್ವೀಕರಿಸಿದ ಸಂದರ್ಭದಲ್ಲಿ ರೈತರ ನಿಯೋಗ ಮಾಡಿದ ಮನವಿಗಳನ್ನು ಆದ್ಯತೆಯ ಮೇಲೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ