Latest

ಭೀಕರ ಅಪಘಾತ; ಹಾವೇರಿ ಮೂಲದ ಯೋಧ ದುರ್ಮರಣ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪಂಜಾಬ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹಾವೇರಿ ಮೂಲದ ಯೋಧರೊಬ್ಬರು ಮೃತಪಟ್ಟ ಘಟನೆ ನಡೆದಿದೆ. ಯೋಧನ ಸಾವಿಗೆ ಸಿಎಂ ಬಸವರಾಜ್ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

ಪಂಜಾಬ್ ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ವೇಳೆ ಅಪಘಾತದಲ್ಲಿ ಹಾವೇರಿ ಮೂಲದ ಯೋಧ ಶಿವರಾಜ್ ಮೃತಪಟ್ಟಿದ್ದಾರೆ. ಶಿವರಾಜ್ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರ ಗ್ರಾಮದ ನಿವಾಸಿ. ಯೋಧನ ನಿಧನಕ್ಕೆ ಸಿಎಂ ಬೊಮ್ಮಾಯಿ ಕಂಬನಿ ಮಿಡಿದಿದ್ದಾರೆ.

Home add -Advt

ಈ ಕುರಿತು ಟ್ವೀಟ್ ಮಾಡಿರುವ ಸಿಎಂ, ಪಂಜಾಬನಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಂದರ್ಭದಲ್ಲಿ ಅಪಘಾತಕ್ಕೊಳಗಾಗಿ ವೀರಮರಣ ಹೊಂದಿದ ಹಾವೇರಿ ಜಿಲ್ಲೆಯ ನಮ್ಮ ಶಿಗ್ಗಾಂವಿ ತಾಲೂಕಿನ ಶೀಲವಂತ ಸೋಮಾಪುರದ ವೀರ ಯೋಧ ಶಿವರಾಜ್ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ.

ಅವರ ಕುಟುಂಬದವರಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಿಳಿಸಿದ್ದಾರೆ.

JDS ವಕ್ತಾರ ಸೇರಿ 14 ಜನರ ವಿರುದ್ಧ FIR ದಾಖಲು

https://pragati.taskdun.com/politics/jds-leadrsfir-filec-p-yogeshwar/

Related Articles

Back to top button