*ಮೊಬೈಲ್ ನೋಡಿದ್ದು ಸಾಕು; ಚೆನ್ನಾಗಿ ಓದು ಎಂದು ಬುದ್ಧಿ ಹೇಳಿದ್ದಕ್ಕೆ ಆತ್ಮಹತ್ಯೆಗೆ ಶರಣಾದ SSLC ವಿದ್ಯಾರ್ಥಿ*

ಪ್ರಗತಿವಾಹಿನಿ ಸುದ್ದಿ: ಮಕ್ಕಳ ಕೈಯಲ್ಲಿ ಮೊಬೈಲ್ ಒಂದಿದ್ದರೆ ಸಾಕು. ಊಟ-ಆಟ-ಪಾಠ ಯಾವುದೂ ಬೇಡ. ಮೊಬೈಲ್ ಲೇ ಪ್ರಪಂಚ ಎನ್ನುವಷ್ಟರ ಮಟ್ಟಕ್ಕೆ ಅಡಿಕ್ಟ್ ಆಗಿ ಬಿಡುತ್ತಾರೆ. ಹೀಗೆ ಮೊಬೈಲ್ ಫೋನ್ ನಲ್ಲೇ ಹೆಚ್ಚು ಕಾಲ ಕಳೆಯುತ್ತಿದ್ದ ಮಗನಿಗೆ ಪೋಷಕರು ಬೈದು ಬುದ್ಧಿ ಹೇಳಿದ್ದೇ ತಪ್ಪಾಗಿ ಹೋಗಿದೆ. ಮನನೊಂದ ವಿದ್ಯಾರ್ಥಿ ದುಡುಕಿನ ನಿರ್ಧಾರ ಮಾಡಿದ್ದಾನೆ.
ಮೊಬೈಲ್ ಫೋನ್ ನೋಡುವುದು ಕಡಿಮೆ ಮಾಡಿ, ಚೆನ್ನಾಗಿ ಓದು ಎಂದು ತಂದೆ-ತಾಯಿ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು 16 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮಲ್ಲೂರು ಗ್ರಾಮದಲ್ಲಿ ನಡೆದಿದೆ.
ಎಸ್.ಎಸ್.ಎಲ್.ಸಿ ವಿದ್ಯಾರ್ಥಿ ಹರ್ಷ ಮೋರೆ ಮೃತ ಬಾಲಕ. ಪರೀಕ್ಷೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಪೋಷಕರು ಮಗನಿಗೆ ಮೊಬೈಲ್ ಬಿಟ್ಟು ವಿದ್ಯಾಭ್ಯಾಸದ ಕಡೆ ಗಮನ ಕೊಡು ಎಂದು ಬೈದಿದ್ದಾರೆ. ಇಷ್ಟಕ್ಕೆ ಮನನೊಂದ ಹರ್ಷ ಮನೆಯಲ್ಲಿ ಕೋಣೆಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿದ್ದಾನೆ.
ಬ್ಯಾಡಗಿ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಸ್ಥ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ




