Kannada NewsKarnataka NewsLatest

*ಕಬ್ಬಿಗೆ ದರ ನಿಗದಿ ಸಭೆ ವಿಫಲ*: *ಮತ್ತೆ ಭುಗಿಲೆದ್ದ ರೈತರ ಆಕ್ರೋಶ*: *ಜಿಲ್ಲಾಧಿಕಾರಿ ಕಚೇರಿಗೆ ನುಗ್ಗಿದ ಹೋರಾಟಗಾರರು*

ಪ್ರಗತಿವಾಹಿನಿ ಸುದ್ದಿ: ಕಬ್ಬು ಬೆಳೆಗೆ ಬೆಲೆ ನಿಗದಿ ವಿಚಾರವಾಗಿ ಇಂದು ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ರೈತ ಮುಖಂಡರು ಹಾಗೂ ಕಾರ್ಖಾನೆ ಮಾಲೀಕರ ನಡುವೆ ಸಭೆ ನಡೆಯಿತು. ಆದರೆ ಸಭೆ ವಿಫವಾಗಿದೆ.

ಕಬ್ಬು ಬೆಳೆಗಾರರು ಪ್ರತಿ ಟನ್ ಕಬ್ಬಿಗೆ 3500 ರೂಪಾಯಿ ಬೆಲೆ ನಿಗದಿ ಮಾಡುವಂತೆ ಸಭೆಯಲ್ಲಿ ಬೇದಿಕೆ ಇಟ್ಟಿದ್ದರು. ಆದರೆ ಕಾರ್ಖಾನೆ ಮಾಲೀಕರು ಈ ಬಗ್ಗೆ ಒಮ್ಮತದ ತೀರ್ಮಾನಕ್ಕೆ ಬಾರದ ಹಿನ್ನೆಲೆಯಲ್ಲಿ ಸಭೆ ವಿಫಲವಾಗಿದೆ.

ಜಿಲ್ಲಾಧಿಕಾರಿ ನೇತೃತ್ವದಲ್ಲಿ ನಡೆದ ಸಭೆ ವಿಫಲವಾಗುತ್ತಿದ್ದಂತೆ ರೈತರ ಆಕ್ರೋಶ ಭುಗಿಲೆದ್ದಿದೆ. ಸಾವಿರಾರು ಸಂಖ್ಯೆಯಲ್ಲಿ ಡಿಸಿ ಕಚೇರಿಯತ್ತ ಆಗಮಿಸಿದ ರೈತರು, ಪೊಲೀಸ್ ಭದ್ರತೆಯನ್ನೂ ಲೆಕ್ಕಿಸದೇ ಡಿಸಿ ಕಚೇರಿ ಗೇಟ್ ಮೂಲಕ ಒಳ ನುಗ್ಗಿದ್ದಾರೆ. ರೈತ ಮುಖಂಡ ಚೂನಪ್ಪ ಪೂಜಾರಿ ನೇತೃತ್ವದಲ್ಲಿ ಕಚೇರಿ ಆವರಣದಲ್ಲಿಯೇ ಧರಣಿ ನಡೆಸುತ್ತಿದ್ದು, ಸರ್ಕಾಅರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಆಕ್ರೋಶ ಹೆಚ್ಚುತ್ತಿದ್ದಂತೆ ಜಿಲ್ಲಾಧಿಕಾರಿಗಳು ರೈತ ಮುಖಂಡರು ಹಾಗೂ ಕಾರ್ಖಾನೆ ಮಾಲೀಕರೊಂದಿಗೆ ಮತ್ತೊಂದು ಸುತ್ತಿನ ಸಭೆ ನಡೆಸಲು ಮುಂದಾಗಿದ್ದಾರೆ.

Related Articles

Back to top button