Karnataka NewsLatestPolitics

*ದೇವಸ್ಥಾನದ ಆವರಣದಲ್ಲಿ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದ ಮುಸ್ಲಿಂ ಯುವಕ*

ಪ್ರಗತಿವಾಹಿನಿ ಸುದ್ದಿ: ದೇವಸ್ಥಾನದ ಆವರಣದಲ್ಲಿ ಮುಸ್ಲಿಂ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿ ವಿಕೃತಿ ಮೆರೆದಿರುವ ಘಟನೆ ನಡೆದಿದೆ. ಯುವಕ ಹುಚ್ಚಾಟ ಕಂಡು ಸಾರ್ವಜನಿಕರು ಆತನನ್ನು ಹಿಡಿದು ಥಳಿಸಿದ್ದಾರೆ.

ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿರುವ ಆಂಜನೇಯ ಮತ್ತು ಬನ್ನಿ ಮಹಾಕಾಳಿ ದೇವಾಲಯದ ಆವರಣದಲ್ಲಿ ಯುವಕನೊಬ್ಬ ಮೂತ್ರ ವಿಸರ್ಜನೆ ಮಾಡಿದ್ದಾನೆ. ಜಾಫರ್ ಎಂಬ ಯುವಕ ಈ ಕೃತ್ಯವೆಸಗಿದ್ದು, ಸ್ಥಳೀಯರು ಶಾಕ್ ಆಗಿದ್ದಾರೆ.

Home add -Advt

ಯುವಕನ ಕೃತ್ಯವನ್ನು ಗಮನಿಸಿದ ಸ್ಥಳೀಯರು ತಕ್ಷಣ ತರಾಟೆಗೆ ತೆಗೆದುಕೊಂಡಿದ್ದಾರೆ. ದೇಗುಲದ ಪಾವಿತ್ರ್ಯತೆಯನ್ನು ಭಂಗಗೊಳಿಸಿದ ಬಗ್ಗೆ ಪ್ರಶ್ನಿಸಿದಾಗ, ಯುವಕ ಸ್ಥಳೀಯರೊಂದಿಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾನೆ. ಇದರಿಂದ ಆಕ್ರೋಶಗೊಂಡ ಜನರು ಯುವಕನನ್ನು ಥಳಿಸಿ, ನಂತರ ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.

ಪೊಲೀಸರು ಯುವಕ ಜಾಫರ್‌ನನ್ನು ವಶಕ್ಕೆ ಪಡೆದುಕೊಂಡಿದ್ದು, ಆತನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಸ್ಥಳೀಯರು ಮತ್ತು ಹಿಂದೂಪರ ಸಂಘಟನೆಗಳು ಒತ್ತಾಯಿಸಿವೆ.

Related Articles

Back to top button