Latest

ಎತ್ತಿನ ಬಂಡಿ ಸಮೇತ ನೀರಿನಲ್ಲಿ ಕೊಚ್ಚಿ ಹೋದ ಇಬ್ಬರು

ಪ್ರಗತಿವಾಹಿನಿ ಸುದ್ದಿ; ಹಾವೇರಿ: ತುಂಗಭದ್ರಾ ನದಿ ನೀರಿನ ಸೆಳೆತಕ್ಕೆ ಎತ್ತಿನ ಬಂಡಿ ಸಮೇತ ಇಬ್ಬರು ನೀರಿನಲ್ಲಿ ಕೊಚ್ಚಿಹೋದ ಘಟನೆ ಹಾವೇರಿ ಜಿಲ್ಲೆಯಲ್ಲಿ ನಡೆದಿದೆ.

ರಾಜ್ಯಾದ್ಯಂತ ಭಾರಿ ಮಳೆಯಾಗುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಈ ನಡುವೆ ಇಂದು ಮುಂಜಾನೆ ತುಂಗಭದ್ರಾ ನದಿಯಲ್ಲಿ ಇಬ್ಬರು ಎತ್ತಿನ ಬಂಡಿ ಸಮೇತ ನೀರು ಪಾಲಾಗಿದ್ದಾರೆ. ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕೋಣನತಂಬಗಿಯಲ್ಲಿ ಈ ಘಟನೆ ನಡೆದಿದೆ.

ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಹಾಗೂ ರಾಣೆಬೆನ್ನೂರು ಗ್ರಾಮಾಂತರ ಠಾಣೆ ಪೊಲೀಸರು ದೌಡಾಯಿಸಿದ್ದು, ಸ್ಥಳಿಯರ ನೆರವಿನೊಂದಿಗೆ ಬೋಟ್ ಸಹಾಯದಿಂದ ನೀರುಪಾಲಾದವರ ಶೋಧಕಾರ್ಯ ನಡೆಸುತ್ತಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button