ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಹವ್ಯಕ ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಸಂಸ್ಥೆ ಹುಬ್ಬಳ್ಳಿ-ಧಾರವಾಡ ವತಿಯಿಂದ ಆಗಸ್ಟ್ 6ರಂದು ಹುಬ್ಬಳ್ಳಿಯಲ್ಲಿ ಹವ್ಯಕ ಹಬ್ಬ ಕಾರ್ಯಕ್ರಮ ಆಯೋಜಿಸಲಾಗಿದೆ.
ಹುಬ್ಬಳ್ಳಿಯ ಲೋಕಮಾನ್ಯ ತಿಲಕ ರಸ್ತೆಯ ಲೂತಿಮಠ ಲೇ ಔಟ್ ನಲ್ಲಿರುವ ಹವ್ಯಕ ಭವನದಲ್ಲಿ ಹವ್ಯಕ ಹಬ್ಬ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿದ್ದು, ಮುಖ್ಯ ಅತಿಥಿಗಳಾಗಿ ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ್, ಹುಬ್ಬಳ್ಳಿ ಸೆಂಟ್ರಲ್ ಶಾಸಕ ಮಹೇಶ್ ತೆಂಗಿನಕಾಯಿ ಆಗಮಿಸಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಧಾರವಾಡ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ, ರೈಲ್ವೆ ಇಲಾಖೆ ಅಧಿಕಾರಿ ಸಂತೋಷ್ ಹೆಗಡೆ ಆಗಮಿಸಲಿದ್ದು, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಹವ್ಯಕ ಸಂಸ್ಥೆ ಅಧ್ಯಕ್ಷ ವಿ.ಎಂ.ಭಟ್ ವಹಿಸಲಿದ್ದಾರೆ.
ಮುಂಜಾನೆ 8 ಗಂಟೆಯಿಂದ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ನಡೆಯಲಿದ್ದು,10 ಗಂಟೆಗೆ ಆರತಿ ಬಟ್ಟಲಿನ ಅಲಂಕಾರ ಸ್ಪರ್ಧೆ, 11 ಗಂಟೆಯಿಂದ ಪ್ರತಿಭಾ ಪುರಸ್ಕಾರ ನಡೆಯಲಿದೆ.3 ಗಂಟೆಗೆ ಭಾಷಣ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ, 5 ಗಂಟೆಗೆ ಬಹುಮಾನ ವಿತರಣೆ, ಸಂಜೆ 5.30ರಿಂದ ಪಂಡಿತ್ ಗಣಪತಿ ಭಟ್ ಹಾಸಣಗಿ, ಸಂಗೀತಾ ಹೆಗಡೆ ಗಿಳಿಗುಂಡಿಯವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ