Kannada NewsKarnataka NewsNationalPolitics

*ಹೆಚ್​ಡಿ ದೇವೇಗೌಡ ಅವರ ಪತ್ನಿ ಚೆನ್ನಮ್ಮ ಆಸ್ಪತ್ರೆಗೆ ದಾಖಲು*

ಪ್ರಗತಿವಾಹಿನಿ ಸುದ್ದಿ: ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡರ ಪತ್ನಿ ಚೆನ್ನಮ್ಮ ಆರೋಗ್ಯದಲ್ಲಿ ಏರುಪೇರಾಗಿದ್ದು, ಬುಧವಾರ ರಾತ್ರಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. 

ಕಳೆದ ಕೆಲವು ದಿನಗಳಿಂದ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಚೆನ್ನಮ್ಮ ಅವರು ಮನೆಯಲ್ಲೇ ವಿಶ್ರಾಂತಿ ಪಡೆಯುತ್ತಿದ್ದರು. ಆದರೆ ನಿನ್ನೆ ರಾತ್ರಿ ಸಮಸ್ಯೆ ಮತ್ತಷ್ಟು ಉಲ್ಬಣಗೊಂಡಿದ್ದರಿಂದ ಕುಟುಂಬಸ್ಥರು ಆಸ್ಪತ್ರೆಗೆ ಕರೆತಂದಿದ್ದಾರೆ. ತೀವ್ರ ನಿಗಾ ಘಟಕದಲ್ಲಿ (ICU) ಅವರಿಗೆ ಅಗತ್ಯ ತುರ್ತು ಚಿಕಿತ್ಸೆ ನೀಡಲಾಗುತ್ತಿದ್ದು ತಜ್ಞ ವೈದ್ಯರ ತಂಡ ಅವರ ಆರೋಗ್ಯದ ಮೇಲೆ ನಿರಂತರ ನಿಗಾ ವಹಿಸಿದೆ.

Home add -Advt

ತಡರಾತ್ರಿ ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಆಸ್ಪತ್ರೆಗೆ ಭೇಟಿ ನೀಡಿ ತಾಯಿಯ ಆರೋಗ್ಯದ ಸ್ಥಿತಿಗತಿಯನ್ನು ವೈದ್ಯರಿಂದ ವಿಚಾರಿಸಿದ್ದಾರೆ.

ಚೆನ್ನಮ್ಮ ಅವರ ಆರೋಗ್ಯವನ್ನು ಪರೀಕ್ಷಿಸಿರುವ ಮಣಿಪಾಲ್ ಆಸ್ಪತ್ರೆಯ ವೈದ್ಯರು, ಸದ್ಯಕ್ಕೆ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ತಿಳಿಸಿದ್ದಾರೆ. ಆದಾಗ್ಯೂ ಮುಂಜಾಗ್ರತಾ ಕ್ರಮವಾಗಿ ಇನ್ನೂ ಎರಡು ದಿನಗಳ ಕಾಲ ಆಸ್ಪತ್ರೆಯಲ್ಲೇ ಉಳಿದುಕೊಂಡು ಚಿಕಿತ್ಸೆ ಪಡೆಯುವಂತೆ ಸೂಚಿಸಲಾಗಿದೆ. 

Related Articles

Back to top button