
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತಕ್ಷಣ ವಿಶೇಷ ಅಧಿವೇಶನ ಕರೆಯುವಂತೆ ಆಗ್ರಹಿಸಿ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಸಿಎಂ ಯಡಿಯೂರಪ್ಪ, ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ರಾಜ್ಯಪಾಲ ವಜುಭಾಯಿ ವಾಲಾ ಅವರಿಗೆ ಪತ್ರ ಬರೆದಿದ್ದಾರೆ.
ಕೋವಿಡ್ ಸ್ಥಿತಿಗತಿ, ಸರ್ಕಾರದ ಮೇಲಿನ ಭ್ರಷ್ಟಾಚಾರ ಆರೋಪ, ಆಡಳಿತದಲ್ಲಿ ಅನ್ಯರ ಹಸ್ತಕ್ಷೇಪ ಮತ್ತು ಪ್ರಮುಖವಾಗಿ ಕನ್ನಡ, ಕನ್ನಡಿಗ, ಕರ್ನಾಟಕದ ವಿಚಾರದಲ್ಲಿ ಆಗುತ್ತಿರುವ ಹಿನ್ನಡೆ ಕುರಿತು ಚರ್ಚಿಸಲು ವಿಧಾನಸಭೆಯ ವಿಶೇಷ ಅಧಿವೇಶನ ಕರೆಯಬೇಕು ಎಂದು ಒತ್ತಾಯಿಸಿದ್ದಾರೆ.
ನೀರಾವರಿ ಯೋಜನೆಯಲ್ಲಿ 20,000 ಕೋಟಿ ಕಿಕ್ ಬ್ಯಾಕ್ ಆರೋಪ, ಮುಖ್ಯಮಂತ್ರಿಗಳ ಕುಟುಂಬದವರ ವಿರುದ್ಧವೇ ಸ್ವಪಕ್ಷದ ಹಿರಿಯ ನಾಯಕರೇ ಆರೋಪ ಮಾಡಿದ್ದರೂ ತನಿಖೆಗೆ ಮುಂದಾಗದ ಸರ್ಕಾರದ ನಡೆ, ಅಬಕಾರಿ ಇಲಾಖೆಯಲ್ಲಿನ ಲಂಚ ಹಗರಣ ಇವುಗಳ ಬಗ್ಗೆ ಸಮರ್ಪಕ ಚರ್ಚೆ ನಡೆಯಬೇಕಿದೆ.
ಕೊರೊನಾ ಲಾಕ್ ಡೌನ್ ನಲ್ಲಿ ನೀಡಿದ ಪರಿಹಾರ ಸಮರ್ಪಕವಾಗಿಲ್ಲ ಅಲ್ಲದೇ ಮೂರನೇ ಅಲೆ ಬಗ್ಗೆ ಸರ್ಕಾರ ಕೈಗೊಂಡಿರುವ ಸಿದ್ಧತೆಗಳಾದರೂ ಏನು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆಯೂ ಚರ್ಚಿಸ ಬೇಕಿದೆ ಹಾಗಾಗಿ ವಿಶೇಷ ಅಧಿವೇಶನವನ್ನು ತಕ್ಷಣ ಕರೆಯಬೇಕು ಎಂದು ಆಗ್ರಹಿಸಿದ್ದಾರೆ.
ಮಾಜಿ ಕಾರ್ಪೊರೇಟರ್ ಹತ್ಯೆ ಪ್ರಕರಣ; ನಾಲ್ವರು ಆರೋಪಿಗಳು ವಶಕ್ಕೆ