ಆರೋಗ್ಯ ಸಚಿವರು ಹಾಗೂ ವೈದ್ಯಕೀಯ ಶಿಕ್ಷಣ ಸಚಿವರ ನಡುವೆ ಇಲ್ಲದ ಒಮ್ಮತ?

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಹರಡದಂತೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದ್ದು, ಈ ನಡುವೆ ಕೊರೊನಾ ವಿರುದ್ಧ ಕೈಗೊಂಡ ಕ್ರಮಗಳ ಕುರಿತ ಸುದ್ದಿಯನ್ನು ಜನರಿಗೆ ತಿಳಿಸುವ ವಿಚಾರದಲ್ಲಿ ಸರ್ಕಾರದಲ್ಲಿ ಎರಡು ಧ್ರುವಗಳು ಸೃಷ್ಟಿಯಾದಂತಿವೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಮಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಕುಮಾರಸ್ವಾಮಿ, ಕೊರೊನಾ ವೈರಸ್ ವಿರುದ್ಧ ಕೈಗೊಂದಿರುವ ಕ್ರಮಗಳ ಬಗ್ಗೆ ಆರೋಗ್ಯ ಸಚಿವರು ಮತ್ತು ವೈದ್ಯಕೀಯ ಶಿಕ್ಷಣ ಸಚಿವರು ಒಮ್ಮತದಿಂದ ಕಾರ್ಯ ನಿರ್ವಹಿಸಲಿ. ಪರಸ್ಪರರ ನಡುವೆ ಸಹಕಾರವಿರಲಿ. ಇದು ಪ್ರಚಾರ ಪಡೆಯುವ ಪ್ರಹಸನವಾಗಬಾರದು. ಜನರಲ್ಲಿ ಗೊಂದಲ ಮೂಡದಿರಲಿ ಎಂದಿದ್ದಾರೆ.

ಈ ಮೂಲಕ ಆರೋಗ್ಯ ಸಚಿವ ಶ್ರೀರಾಮು ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್‌ ನಡುವೆ ಅಸಮಧಾನವಿದೆ ಎಂದು ಪರೋಕ್ಷವಾಗಿ ಹೆಚ್ ಡಿಕೆ ಆರೋಪಿಸಿದ್ದಾರೆ.

ಇದಕ್ಕೆ ಪ್ರತಿಕ್ರಿಯೆ ನೀಡಿರುವ ಶ್ರೀರಾಮುಲು, ನಾನು ಹಾಗೂ ಸುಧಾಕರ್ ಜೊತೆಜೊತೆಗೆ ಜನರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡುತ್ತಿದ್ದೇವೆ. ನಿಮ್ಮ ಗೊಂದಲದಲ್ಲಿ ಯಾವುದೇ ಹುರುಳಿಲ್ಲ. ಇತ್ತೀಚೆಗೆ ಭಾರೀ ಗೊಂದಲದಲ್ಲಿರುವ ನೀವು, ಜನರನ್ನು ಗೊಂದಲಕ್ಕೆ ದೂಡುವ ಕೆಲಸ ಮಾಡದಿರಿ ಎಂದು ತಿರುಗೇಟು ನೀಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button