Kannada NewsKarnataka NewsNationalPolitics

*ಹೆದ್ದಾರಿ ಯೋಜನೆಗಳ ಬಗ್ಗೆ ಸಚಿವ ಗಡ್ಕರಿ ಜತೆ ಮಾತುಕತೆ ನಡೆಸಿದ ಹೆಚ್‌ಡಿಕೆ*

ಪ್ರಗತಿವಾಹಿನಿ ಸುದ್ದಿ: ಕೇಂದ್ರ ಉಕ್ಕು ಸಚಿವ ಹೆಚ್‌. ಡಿ. ಕುಮಾರಸ್ವಾಮಿ ಅವರು, ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಖಾತೆ ಸಚಿವರಾದ ನಿತಿನ್‌ ಗಡ್ಕರಿಯವರನ್ನು ನವದೆಹಲಿಯಲ್ಲಿ ಭೇಟಿಯಾಗಿ ಕರ್ನಾಟಕದಲ್ಲಿ ಬಾಕಿ ಇರುವ ಸಾರಿಗೆ, ಹೆದ್ದಾರಿ ಯೋಜನೆಗಳನ್ನು ಶೀಘ್ರವೇ ಕಾರ್ಯಗತಗೊಳಿಸುವುದು ಹಾಗೂ ಹೊಸ ಯೋಜನೆಗಳನ್ನು ಕೈಗೆತ್ತಿಕೊಳ್ಳುವ ಬಗ್ಗೆ ಮಾತುಕತೆ ನಡೆಸಿದ್ದಾರೆ. 

ಮಂಡ್ಯ ನಗರದ ಹೊರ ವರ್ತುಲ ರಸ್ತೆ ಹಾಗೂ ಹಲಗೂರು – ಕೆ.ಎಂ.ದೊಡ್ಡಿ ರಸ್ತೆಯನ್ನು ಮೇಲ್ದರ್ಜೆಗೇರಿಸಿ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕ ಕಲ್ಪಿಸುವ ಯೋಜನೆಯ ಬಗ್ಗೆಯೂ ಚರ್ಚಿಸಲಾಯಿತು. ಸಚಿವ ಗಡ್ಕರಿಯವರು ನನ್ನ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದರು ಎಂದು ಕುಮಾರಸ್ವಾಮಿ ಎಕ್ಸ್‌ ನಲ್ಲಿ ಪೋಸ್ಟ್‌ ಮಾಡಿದ್ದಾರೆ.

ಕೋಲಾರ ಸಂಸದರಾದ ಮಲ್ಲೇಶ್ ಬಾಬು ಅವರು ಕುಮಾರಸ್ವಾಮಿಯವರ ಜೊತೆಗಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button