Kannada NewsKarnataka NewsPolitics

*ಕೆಪಿಸಿಸಿ ಸಾಮಾಜಿಕ ಮಾಧ್ಯಮ ವಿಭಾಗಕ್ಕೆ ಇವರೆ ಹೊಸ ಸಾರಥಿ*

ಪ್ರಗತಿವಾಹಿನಿ ಸುದ್ದಿ: ಕಾಂಗ್ರೆಸ್ ನಾಯಕ ಮತ್ತು ಮಾಜಿ ಶಾಸಕ ದಿ. ಮಂಚನಹಳ್ಳಿ ಮಹಾದೇವ್ ಅವರ ಪುತ್ರಿ  KPCC ಸಾಮಾಜಿಕ ಮಾಧ್ಯಮ ವಿಭಾಗಕ್ಕೆ ಹೊಸ ಅಧ್ಯಕ್ಷರಾಗಿ ನೇಮಕ ಮಾಡಲಾಗಿದೆ. 

ಹೊಸ ಅಧ್ಯಕ್ಷರನ್ನಾಗಿ ಕಾಂಗ್ರೆಸ್ ರಾಷ್ಟ್ರೀಯ ಮಾಧ್ಯಮ ಸಮಿತಿ ಸದಸ್ಯೆ ಐಶ್ವರ್ಯಾ ಮಹಾದೇವ್ ಅವರನ್ನು ನೇಮಕ ಮಾಡಲಾಗಿದೆ. ಐಶ್ವರ್ಯಾ ಮಹಾದೇವ್ ನೇಮಕ ಮಾಡುವ ಪ್ರಸ್ತಾವನೆಯನ್ನು ಎಐಸಿಸಿ ತಕ್ಷಣದಿಂದ ಜಾರಿಗೆ ಬರುವಂತೆ ಅನುಮೋದಿಸಿದೆ. ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ ವೇಣುಗೋಪಾಲ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Home add -Advt

ಐಶ್ವರ್ಯಾ ಮೂಲತಃ ಮೈಸೂರು ಜಿಲ್ಲೆಯ ಕೆಆರ್ ನಗರದವರಾದ ಐಶ್ವರ್ಯಾ ಮಹಾದೇವ್‌, ಅತಿ ಚಿಕ್ಕ ವಯಸ್ಸಿನಲ್ಲಿಯೇ ಕಾಂಗ್ರೆಸ್ ಮಹಿಳಾ ಘಟಕದ ಕಾರ್ಯದರ್ಶಿ ಹುದ್ದೆಗೇರಿದ್ದರು ಬಳಿಕ ಅವರು, ಕಾಂಗ್ರೆಸ್ ರಾಷ್ಟ್ರೀಯ ವಕ್ತಾರೆಯಾಗಿ ಕಾರ್ಯನಿರ್ವಹಿಸಿದ್ದಾರೆ.

ಐಶ್ವರ್ಯ ದೆಹಲಿ ಮಟ್ಟದಲ್ಲಿ ವಿವಿಧ ಜವಾಬ್ದಾರಿಗಳನ್ನು ನಿಭಾಯಿಸಿದ್ದಾರೆ. ಸಂಸತ್ ವಿಪಕ್ಷ ನಾಯಕ ರಾಹುಲ್ ಗಾಂಧಿ ಹಾಗೂ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರ ಆಪ್ತ ವಲಯದಲ್ಲಿಯೂ ಸಹ ಗುರುತಿಸಿಕೊಂಡಿದ್ದಾರೆ.

Related Articles

Back to top button