
ಪ್ರಗತಿವಾಹಿನಿ ಸುದ್ದಿ : ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ‘ಕರಿಯ’ ಕುಮಾರಸ್ವಾಮಿ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದ ಸಚಿವ ಜಮೀರ್ ಅಹ್ಮದ್ ಅವರು ಇದೀಗ ಕ್ಷಮೆಯಾಚಿಸಿದ್ದಾರೆ.
ಈ ಕುರಿತು ಮೈಸೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ನನ್ನ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಇರಲಿ ಎಂದಿದ್ದಾರೆ. ಈ ಹಿಂದೆ ನಾನು ಅವರು ಜೊತೆಯಲ್ಲಿದ್ದಾಗ ನನ್ನನ್ನು ಅವರು ‘ಕುಳ್ಳ’ ಎನ್ನುತ್ತಿದ್ದರು. ನಾನು ಅವರನ್ನು ‘ಕರಿಯಣ್ಣ’ ಅಂತಾ ಪ್ರೀತಿಯಿಂದ ಪರಸ್ಪರ ಕರೆಯುತ್ತಿದ್ದೇವು. ನಾನು ಅದನ್ನಷ್ಟೇ ಹೇಳಿದ್ದೆ.
ಇನ್ನು ದೇವೇಗೌಡರ ಕುಟುಂಬ ಕೊಂಡುಕೊಳ್ಳುವ ವಿಚಾರಕ್ಕೂ ಜಮೀರ್ ಉತ್ತರಿಸಿದ್ದು, ಯಾರಾದರೂ ಅವರ ಕುಟುಂಬ ಕೊಂಡುಕೊಳ್ಳಲು ಸಾಧ್ಯವೇ ಎಂದ ಜಮೀರ್, ನನಗೆ ದೇವೇಗೌಡರು ಮತ್ತು ಕುಮಾರಸ್ವಾಮಿ ಅವರ ಮೇಲೆ ಅಪಾರ ಗೌರವವಿದೆ ಎಂದು ಹೇಳಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ