
ಪ್ರಗತಿವಾಹಿನಿ ಸುದ್ದಿ: ಪತ್ನಿ ಕಾಟಕ್ಕೆ ಬೇಸತ್ತ ಹೆಡ್ ಕಾನ್ಸ್ ಟೇಬಲ್ ಓರ್ವ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ಬೈಯಪ್ಪನಹಳ್ಳಿಯಲ್ಲಿ ನಡೆದಿದೆ.
ಹುಳಿಮಾವು ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿರುವವರು. ಡೆತ್ ನೋಟ್ ಬರೆದಿಟ್ಟು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾರೆ.
ಪತ್ನಿ ಹಾಗೂ ಮಾವನ ವಿರುದ್ಧ ಗಂಭೀರ ಆರೋಪ ಮಾಡಿರುವ ತಿಪ್ಪಣ್ಣ, ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮಾವನ ವಿರುದ್ಧ ಬೆದರಿಕೆ ಆರೋಪ ಕೂಡ ಮಾಡಿದ್ದಾರೆ.
ಘಟನಾ ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.