
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಾರಿಗೆ ಬಸ್ ಹಾಗೂ ಬೈಕ್ ಮುಖಾ-ಮುಖಿ ಡಿಕ್ಕಿ ಆದ ಪರಿಣಾಮ ಓರ್ವ ಸ್ಥಳದಲ್ಲೆ ಸಾವನ್ನಪ್ಪಿದ್ದರೆ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಬಳ್ಳಿಗೇರಿ-ಮಲಾಬಾದ ಮದ್ಯ ಮಾರ್ಗದ ಬೆವಣೂರು ಕ್ರಾಸ್ ಬಳಿ ಈ ಅವಘಡ ಸಂಭವಿಸಿದೆ. ಮಲಬಾದ್ ಮೂಲದ ನೂರ್ ಸಿರಾಜ್ ಮುಲ್ಲಾ (45) ಮೃತ ದುರ್ದೈವಿಯಾಗಿದ್ದಾನೆ.
ಅಥಣಿ ಮಾರ್ಗವಾಗಿ ಬರುತ್ತಿದ್ದ ಸಾರಿಗೆ ಬಸ್ ಹಾಗೂ ಬೈಕ್ ಮದ್ಯ ಅಪಘಾತ ಸಂಭವಿಸಿದ್ದು ಸ್ಥಳಕ್ಕೆ ಅಥಣಿ ಪೊಲೀಸರು ಭೇಟಿ ನೀಡಿದ್ದಾರೆ. ಇಬ್ಬರನ್ನ ಮೀರಜ್ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ರವಾನಿಸಿದ್ದು ಮೃತನ ದೇಹವನ್ನು ಮರಣೋತ್ತರ ಪರೀಕ್ಷೆಗೆ ತರಲಾಗಿದೆ. ಅಥಣಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.