Latest

*ವಾಟರ್ ಟ್ಯಾಂಕರ್ ಹರಿದು ವಿದ್ಯಾರ್ಥಿ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರಸ್ತೆ ಬದಿ ನಡೆದು ಹೋಗುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಮೇಲೆಯೇ ವಾಟರ್ ಟ್ಯಾಂಕರ್ ಹರಿದು ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದಲ್ಲಿ ನಡೆದಿದೆ.

Home add -Advt

23 ವರ್ಷದ ಇಶಾನ್ ಮೃತ ವಿದ್ಯಾರ್ಥಿ. ಸ್ನೇಹಿತನನ್ನು ಭೇಟಿಯಾಗಲೆಂದು ಬಂದಿದ್ದ ಇಶಾನ್, ರಸ್ತೆ ಪಕ್ಕದಲ್ಲಿ ನಡೆದು ಹೋಗುತ್ತಿದ್ದ. ವೇಗವಾಗಿ ಬಂದ ವಾಟರ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ವಿದ್ಯಾರ್ಥಿಗೆ ಡಿಕ್ಕಿಯಾಗಿದೆ. ಗಾಯಾಳು ವಿದ್ಯಾರ್ಥಿ ಗಂಭೀರವಾಗಿ ಗಾಯಗೊಂಡು ರಸ್ತೆಯಲ್ಲೇ ಬಿದ್ದು ಸಾವನ್ನಪ್ಪಿದ್ದಾನೆ.

ಹೆಣ್ಣೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.


Related Articles

Back to top button