CrimeKannada NewsNational

*ಟ್ರಕ್ ಮತ್ತು ಪಿಕಪ್ ವ್ಯಾನ್ ಮುಖಾಮುಖಿ ಡಿಕ್ಕಿ: 3 ಮಕ್ಕಳು ಸೇರಿ 8 ಸಾವು*

ಪ್ರಗತಿವಾಹಿನಿ ಸುದ್ದಿ: ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿ ಎಂಟು ಜನ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ಮಹಾರಾಷ್ಟ್ರದ ಭಂಡಾರ ಜಿಲ್ಲೆಯಲ್ಲಿ ಸಂಭವಿಸಿದ ಈ ದುರ್ಘಟನೆಯಲ್ಲಿ  ಮೂವರು ಮಕ್ಕಳು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದಾರೆ.

Home add -Advt

ನಾಗಪುರ-ರಾಯಪುರ ರಾಷ್ಟ್ರೀಯ ಹೆದ್ದಾರಿಯ ಪಿಂಪಲ್‌ಗಾಂವ್ ರಸ್ತೆ ಪ್ರದೇಶದಲ್ಲಿರುವ ಭಾವು ಧಾಬಾ ಸಮೀಪ ಈ ಅಪಘಾತ ಸಂಭವಿಸಿದೆ. ವೇಗವಾಗಿ ಸಂಚರಿಸುತ್ತಿದ್ದ ಟ್ರಕ್ ಮತ್ತು ಪಿಕಪ್ ವ್ಯಾನ್ ಮುಖಾಮುಖಿಯಾಗಿ ಡಿಕ್ಕಿಯಾಗಿದ್ದು, ವಾಹನಗಳಲ್ಲಿದ್ದ ಎಂಟು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಅಪಘಾತದ ತೀವ್ರತೆಗೆ ಎರಡೂ ವಾಹನಗಳು ಜಖಂಗೊಂಡಿದ್ದು ಘಟನೆಯ ಬಳಿಕ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ತೆರಳಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

ಅಪಘಾತದಲ್ಲಿ ಗಾಯಗೊಂಡಿರುವ ಮೂವರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ತಕ್ಷಣವೇ ಸಾಕೋಲಿ ಉಪಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯರು ಚಿಕಿತ್ಸೆ ನೀಡುತ್ತಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Related Articles

Back to top button