Karnataka News

*ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ: ನಾಲ್ವರು ಯುವಕರು ಸಾವು*

ಪ್ರಗತಿವಾಹಿನಿ ಸುದ್ದಿ : ಎರಡು ಬೈಕ್‌ಗಳು ಮುಖಾಮುಖಿ ಡಿಕ್ಕಿಯಾಗಿ ನಾಲ್ವರು ಯುವಕರು ಸಾವನ್ನಪ್ಪಿರುವ ಘಟನೆ  ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಆಬಾಳ ಗ್ರಾಮದ ಬಳಿ ಸಂಭವಿಸಿದೆ.

ಭೀಕರ ರಸ್ತೆ ಅಪಘಾತದಲ್ಲಿ ಸಿದ್ದು ಸರೇಶ್ ರೆಡ್ಡಿ, ಮಲ್ಲು ಪೂಜಾರಿ ಮತ್ತು ಪ್ರಕಾಶ್ ಪೂಜಾರಿ ಮೃತಪಟ್ಟಿದ್ದಾರೆ.

ಸೇಡಂನಿಂದ ಆಬಾಳ್ ಕಡೆ ಹೊರಟಿದ್ದ ಒಂದು ಬೈಕ್‌ಗೆ ಎದುರಿಗೆ ಬಂದ ಮತ್ತೊಂದು ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿದ್ದ ನಾಲ್ವರಿಗೆ ತೀವ್ರಸ್ವರೂಪದ ಗಾಯಗಳಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳಕ್ಕೆ ಭೇಟಿ ನೀಡಿದ ಸೇಡಂ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಸಿಕೊಂಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button