ಪ್ರಗತಿವಾಹಿನಿ ಸುದ್ದಿ: ಶಿಕ್ಷಕಿಯಿಂದ ಲಂಚ ಪಡೆಯುತ್ತಿದ್ದಾಗ ಮುಖ್ಯ ಶಿಕ್ಷಕನೊಬ್ಬ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಬೀದರ್ ಹೊರವಲಯದಲ್ಲಿ ನಡೆದಿದೆ.
ತುಕರಾಂ ಕಾಂಬಳೆ ಲೋಕಾಯುಕ್ತ ಬಲೆಗೆ ಬಿದ್ದ ಮುಖ್ಯ ಶಿಕ್ಷಕ. ವಿವೇಕಾನಂದ ಶಾಲೆಯ ಮುಖ್ಯ ಶಿಕ್ಷಕ ತುಕಾರಾಂ ಕಾಂಬಳೆ, ವಿಜ್ಞಾನ ಶಿಕ್ಷಕಿಯ ನಿವೃತ್ತಿ ಮಂಜೂರು ಮಾಡಲು 3 ಲಕ್ಷ ಹಣಕ್ಕೆ ಬೇಡಿಕೆ ಇಟ್ಟಿದ್ದರು.
ಫೈಲ್ ಮೂವ್ ಮಾಡಬೇಕಾದರೆ 3 ಲಕ್ಷ ಹಣ ನೀಡಬೇಕು ಎಂದಿದ್ದಾರೆ. ಈ ಬಗ್ಗೆ ಶಿಕ್ಷಕಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಶಿಕ್ಷಕಿಯಿಂದ 1 ಲಕ್ಷ ರೂಪಾಯಿ ಚೆಕ್ ಹಾಗೂ 50 ಸಾವಿರ ಹಣ ಪಡೆಯುತ್ತಿದ್ದಾಗ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಹಣ ಪಡೆಯುತ್ತಿದ್ದ ಮುಖ್ಯ ಶಿಕ್ಷಕನನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆದಿದ್ದಾರೆ. ಲೋಕಾಯುಕ್ತ ಡಿವೈ ಎಸ್ ಪಿ ಎನ್.ಎಂ.ಓಲೇಕಾರ್ ನೇತೃತ್ವದಲ್ಲಿ ಈ ದಾಳಿ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ