Latest

ಸರ್ಕಾರಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿ ಹೊರಡಿಸಿದ ಆರೋಗ್ಯ ಇಲಾಖೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ತುಮಕೂರು ಜಿಲ್ಲಾಸ್ಪತ್ರೆ ನಿರ್ಲಕ್ಷದಿಂದ ತಾಯಿ ಹಾಗೂ ಅವಳಿ ಮಕ್ಕಳು ಸಾವು ಪ್ರಕರಣದ ಬೆನ್ನಲ್ಲೇ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ ಪ್ರಕಟಿಸಿದೆ.

ತುರ್ತು ಸಂದರ್ಭದಲ್ಲಿ ಯಾವುದೇ ದಾಖಲೆಗಳ ಅಗತ್ಯವಿರುವುದಿಲ್ಲ. ತಾಯಿ ಕಾರ್ಡ್, ಆಧಾರ್ ಕಾರ್ಡ್, ಪಡಿತರ ಚೀಟಿ ಇತರೆ ದಾಖಲೆಗಳ ಅಗತ್ಯವಿಲ್ಲ. ರೋಗಿ ಬಳಿ ಯಾವುದೇ ದಾಖಲೆಗಳು ಇಲ್ಲದಿದ್ದರೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಬೇಕು ಎಂದು ಆರೋಗ್ಯ ಇಲಾಖೆ ತಿಳಿಸಿದೆ.

ಆರೋಗ್ಯ ಸೇವೆ ನೀಡುವಾಗ ರೋಗಿಯ ರಾಷ್ಟ್ರೀಯತೆ, ವರ್ಗ, ಜಾತಿ, ಆರ್ಥಿಕ ಸ್ಥಿತಿಯನ್ನು ಆಸ್ಪತ್ರೆ ಸಿಬ್ಬಂದಿಗಳು ಅವಲಂಭಿಸಬಾರದು. ರೋಗಿಯ ನೋವು ಸಂಕಟ ನಿವಾರಿಸುವುದು ವೈದ್ಯರ ಕರ್ತವ್ಯ. ಇಂತಹ ಘಟನೆ ಮರುಕಳಿಸಿದರೆ ಅಧಿಕಾರಿಗಳು, ವೈದ್ಯರು, ಸಿಬ್ಬಂದಿಗಳನ್ನು ಹೊಣೆಗಾರರನ್ನಾಗಿ ಮಾಡಿ ಸೇವೆಯಿಂದ ವಜಾ ಮಾಡಲಾಗುವುದು. ಇಲ್ಲವೇ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ಖಡಕ್ ಎಚ್ಚರಿಕೆ ನೀಡಿದೆ.

ಚಂದ್ರಶೇಖರ್ ಸಾವು ಪ್ರಕರಣ; ಕೊಲೆ ಕೇಸ್ ದಾಖಲು

Home add -Advt

https://pragati.taskdun.com/latest/mla-renukacharyabrother-sonchandrashekhar-death-casefirmurder-case/

Related Articles

Back to top button