*ಡೆಂಗ್ಯೂ ಹೆಚ್ಚಿರುವ ಪ್ರದೇಶಗಳಿಗೆ ಉಪನಿರ್ದೇಶಕರ ತಂಡ ಭೇಟಿಗೆ ಸೂಚಿಸಿದ ಆರೋಗ್ಯ ಸಚಿವ ಗುಂಡೂರಾವ್*
ಪ್ರಗತಿವಾಹಿನಿ ಸುದ್ದಿ: ಡೆಂಗ್ಯು ಹೆಚ್ಚಿನ ಪ್ರಮಾಣದಲ್ಲಿರುವ ಹಾಟ್ ಸ್ಪಾಟ್‌ಗಳಿಗೆ ಉಪನಿರ್ದೇಶಕರ ತಂಡ ಭೇಟಿ ನೀಡಬೇಕು ಎಂದು ಆರೋಗ್ಯ ಸಚಿವರ ನೇತೃತ್ವದಲ್ಲಿ ನಡೆದ ಮಹತ್ವದ ಸಭೆಯಲ್ಲಿ ನಿರ್ಧಾರ ಕೈಗೊಂಡು ಸೂಚನೆ ನೀಡಲಾಗಿದೆ.
ಆರೋಗ್ಯ ಸಚಿವರ ನೇತೃತ್ವದಲ್ಲಿ ನಡೆದ ವೀಡಿಯೋ ಕಾನ್ಸರೆನ್ಸ್ ನಲ್ಲಿ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಸಿಇಒಗಳ ಜೊತೆ ಚರ್ಚಿಸಿ ಡೆಂಗ್ಯೂ ಪ್ರಕರಣ ಹೆಚ್ಚಿರುವ 10 ಜಿಲ್ಲೆಗಳಿಗೆ ಇಲಾಖೆ ಉಪನಿರ್ದೇಶಕರು ಭೇಟಿ ನೀಡಲು ಸೂಚಿಸಲಾಗಿದೆ.
ಇನ್ನು ಎರಡು ತಿಂಗಳು ಅಲರ್ಟ್ ಆಗಿರುವಂತೆ ಅಧಿಕಾರಿಗಳಿಗೆ ಆದೇಶಿಸಲಾಗಿದ್ದು, ಡೆಂಗ್ಯೂ ತಡೆಗಟ್ಟಲು ಆರೋಗ್ಯಧಿಕಾರಿಗಳು ಸಂಪೂರ್ಣ ತಮ್ಮನ್ನು ತೊಡಗಿಸಿಕೊಂಡು ಡೆಂಗ್ಯೂ ಹತೋಟಿಗೆ ತರುವತ್ತ ಹೆಚ್ಚಿನ ಗಮನ ಹರಿಸಲು ಸೂಚನೆ ನೀಡಲಾಗಿದೆ. ಡೆಂಗ್ಯೂ ಡೆತ್ ಆಡಿಟ್ ಮಾಡುವಂತೆ ಜಿಲ್ಲಾಧಿಕಾರಿಗಳಿಗೆ ಕಟ್ಟು ನಿಟ್ಟಾಗಿ ಆದೇಶಿಸಲಾಗಿದೆ. ಯಾವುದನ್ನು ಮುಚ್ಚಿಡದೆ ಡೆಂಗ್ಯೂವಿನಿಂದ ಸಾವುಗಳಾಗಿದ್ದರೆ ಅದನ್ನ ಡೆಂಗ್ಯೂ ಸಾವು ಎಂದೇ ವರದಿ ಸಲ್ಲಿಸುವಂತೆ ಆರೋಗ್ಯ ಸಚಿವರು ತಿಳಿಸಿದ್ದಾರೆ.
ಆಶಾ ಕಾರ್ಯಕರ್ತೆಯರು ಕಡಿಮೆ ಇರುವ ಪ್ರದೇಶಗಳಲ್ಲಿ ಸ್ವಯಂ ಸೇವಕರು, ಎನ್‌ಸಿಸಿ, ಎನ್‌ಎಸ್‌ಎಸ್, ನರ್ಸಿಂಗ್ ವಿದ್ಯಾರ್ಥಿಗಳನ್ನು ತಂಡಕ್ಕೆ ಸೇರಿಸಿಕೊಳ್ಳುವಂತೆ ಸೂಚನೆ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ