Latest

ಆರೋಗ್ಯ ಸಚಿವರಿಗೂ ಕೊರೊನಾ ಸೋಂಕು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈಗಗಾಲೇ ರಾಜ್ಯದಲ್ಲಿ ಹಲವಾರು ರಾಜಕೀಯ ನಾಯಕರಿಗೆ ಕೊರೊನಾ ಪಾಸಿಟೀವ್ ಬಂದಿದ್ದು, ಇದೀಗ ಆರೋಗ್ಯ ಸಚಿವ ಶ್ರೀರಾಮುಲು ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.

ಈ ಕುರಿತು ಸ್ವತ: ಶ್ರೀರಾಮುಲು ಮಾಹಿತಿ ನೀಡಿದ್ದು, ಇಂದು ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಕೊವಿಡ್ ಟೆಸ್ಟ್ ಮಾಡಿಸಿಕೊಂಡಾಗ ನನಗೆ ಕೊರೊನಾ ಪಾಸಿಟೀವ್ ಬಂದಿದೆ ಎಂದು ತಿಳಿಸಿದ್ದಾರೆ.

Home add -Advt

ಮಾನ್ಯ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ನನ್ನ ಇಲಾಖೆ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳೂ ಜೀವದ ಹಂಗು ತೊರೆದು ಮಹಾಮಾರಿಯ ವಿರುದ್ಧ ಹಗಲಿರುಳೂ ಶ್ರಮಿಸುತ್ತಿವೆ.

ಕೊರೊನ ಕಾಣಿಸಿಕೊಂಡ ಸಮಯದಿಂದಲೂ 30 ಜಿಲ್ಲೆಗಳಲ್ಲಿ ಪ್ರವಾಸ ಮಾಡಿ ಜನರಿಗೆ ಸೂಕ್ತ ಚಿಕಿತ್ಸೆ ಸಿಗುವಂತೆ ಮಾಡುವ ಸರ್ಕಾರದ ಆಶಯಕ್ಕೆ ತಕ್ಕಂತೆ ಕೆಲಸ ಮಾಡುತ್ತಿರುವ ಈ ಸಂದರ್ಭದಲ್ಲಿ ನನಗೆ ಸತ್ವಪರೀಕ್ಷೆಯ ಸಮಯ ಎದುರಾಗಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲಿದ್ದೇನೆ. ಆದಷ್ಟೂ ಬೇಗ ಗುಣಮುಖನಾಗಿ ಸಂಕಷ್ಟ ಸಮಯದಲ್ಲಿ ಇನ್ನಷ್ಟು ಜನಸೇವೆ ಮಾಡಲು ಶಕ್ತಿ ಕೊಡುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.

ಇತ್ತೀಚಿಗೆ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ವಹಿಸಲು ಕೋರುತ್ತೇನೆ ಎಂದು ತಿಳಿಸಿದ್ದಾರೆ.

Related Articles

Back to top button