ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ಆರೋಗ್ಯ ಸಚಿವ ಬಿ.ಶ್ರೀರಾಮುಲು ಚಿತ್ರದುರ್ಗ ಜಿಲ್ಲಾಸ್ಪತ್ರೆಯಲ್ಲಿ ವಾಸ್ತವ್ಯ ಹೂಡಿದ್ದಾರೆ. ನಿನ್ನೆ ರಾತ್ರಿ ವಾಸ್ತವ್ಯಕ್ಕೆ ಆಸ್ಪತ್ರೆಗೆ ಭೇಟಿ ನೀಡಿದ ಸಚಿವ ಶ್ರೀರಾಮುಲು ಹೊರಗುತ್ತಿಗೆ ನೌಕರರ ಸಮಸ್ಯೆ ಆಲಿಸಿದ್ರು. ಬಳಿಕ ನೇರವಾಗಿ ಆಸ್ಪತ್ರೆ ವಾರ್ಡ್ ಗಳಿಗೆ ಭೇಟಿ ನೀಡಿ ರೋಗಿಗಳಿಗೆ ಉತ್ತಮ ಹಾಗೂ ಸೂಕ್ತ ಚಿಕಿತ್ಸೆ ಸಿಗುತ್ತದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಸಿದರು.
ಈ ವೇಳೆ ಮಾತನಾಡಿದ ಸಚಿವರು, ನಾನು ಬರುತ್ತೇನೆ ವಾಸ್ತವ್ಯ ಹೂಡುತ್ತೇನೆ ಎಂಬ ಕಾರಣಕ್ಕೆ ಆಸ್ಪತ್ರೆಯನ್ನ ಸುಚಿಯಾಗಿ ಇಡುತ್ತಾರೆ. ಇನ್ನು ಮುಂದೆ ಈ ಪ್ರಕ್ರಿಯೆ ಪ್ರತಿನಿತ್ಯ ನಡೆಯಬೇಕು, ಇದು ನನ್ನ ಉಸ್ತುವಾರಿ ಜಿಲ್ಲೆಯಾಗಿದ್ದು ರೋಗಿಗಳಿಗೆ , ಹೆರಿಗೆಯಾದ ತಾಯಂದಿರಿಗೆ ಉತ್ತಮ ಚಿಕಿತ್ಸೆ ನೀಡಬೇಕು. ಆ ನಿಟ್ಟಿನಲ್ಲಿ ವೈದ್ಯಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಬಳ್ಳಾರಿ ಸೇರಿದಂತೆ ವಿವಿಧ ಪ್ರಕರಣಗಳ ವರದಿ ತರಿಸಿಕೊಂಡು ಯಾರೇ ಕರ್ತವ್ಯ ಲೋಪ ಎಸಗಿದ್ರು ಅವರ ಮೇಲೆ ಶಿಸ್ತು ಕ್ರಮ ಕೈಗೊಂಡು ಅಮಾನತು ಮಾಡುತ್ತೇನೆ ಎಂದು ಎಚ್ಚರಿಸಿದರು.
ರಾತ್ರಿ ಜಿಲ್ಲಾಸ್ಪತ್ರೆಯಲ್ಲೆ ವಾಸ್ತವ್ಯ ಮಾಡಿದ ಶ್ರೀರಾಮುಲು, ಬೆಳಗ್ಗೆ ಭೋವಿ ಗುರುಪೀಠದಲ್ಲಿ ಯೋಗ ಮತ್ತು ಪೂಜೆ ಮುಗಿಸಿ ಮತ್ತೆ ಬಂದು ರೋಗಿಗಳು ಹಾಗೂ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ