Latest

ಆರೋಗ್ಯ ಸಚಿವರಿಗೆ ಮಾತೃವಿಯೋಗ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ(95) ತಡ ರಾತ್ರಿ ನಿಧನರಾಗಿದ್ದಾರೆ. ಈ ಕುರಿತು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

95 ವರ್ಷಗಳ ಹೊನ್ನರಮ್ಮ ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ಒಳಗಾಗಿದ್ದರು. ಬೆಂಗಳೂರಿನ ಬೌರಿಂಗ್ ಆಸ್ಪತ್ರಗೆ ದಾಖಲಾಗಿದ್ದ ಸಚಿವರ ತಾಯಿ ಸಂಪೂರ್ಣ ಗುಣಮುಖರಾಗಿ ಗುರುವಾರವಷ್ಟೇ ಡಿಸ್ಚಾರ್ಜ್ ಆಗಿ ಬಳ್ಳಾರಿಯ ಮನೆಗೆ ತೆರಳಿದ್ದರು.

ತಡ ರಾತ್ರಿ ಬಳ್ಳಾರಿಯಲ್ಲಿ ವಯೋಸಹಜ ಕಾರಣದಿಂದ ಆರೋಗ್ಯದಲ್ಲಿ ಏರುಪೇರು ಕಾಣಿಸಿಕೊಂಡಿದ್ದು, ಈ ವೇಳೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ರಾತ್ರಿ 11.50ಕ್ಕೆ ನಿಧನರಾಗಿದ್ದಾರೆ. ಇಂದು ಬೆಳಗ್ಗೆ 5.30ಕ್ಕೆ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡುವ ಮೂಲಕ ಸ್ಪಷ್ಟಪಡಿಸಿರುವ ಸಚಿವ ಶ್ರೀರಾಮುಲು, ನನ್ನ ತಾಯಿಯವರಾದ ಹೊನ್ನೂರಮ್ಮ ಅವರು ವಯೋಸಹಜ ಕಾರಣದಿಂದ ದೈವಾಧೀನರಾದರೆಂದು ತಿಳಿಸಲು ವಿಷಾದಿಸುತ್ತೇನೆ. ತೊಂಬತ್ತೈದು ವರ್ಷಗಳ ತುಂಬು ಜೀವನ ನಡೆಸಿದ್ದ ಅಮ್ಮ, ಇತ್ತೀಚೆಗಷ್ಟೇ ಕೋವಿಡ್ ಸೋಂಕಿಗೆ ತುತ್ತಾಗಿ ಬೌರಿಂಗ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಸಂಪೂರ್ಣವಾಗಿ ಗುಣಮುಖರಾಗಿ ಬಳ್ಳಾರಿಯ ಮನೆಗೆ ಹಿಂದಿರುಗಿದ್ದರು ಎಂದು ತಿಳಿಸಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button