Kannada NewsKarnataka NewsNationalPolitics

*ಮುಷ್ಕರ ವಾಪಸ್ ಪಡೆದ ಆರೋಗ್ಯ ಸಿಬ್ಬಂದಿ*

ಪ್ರಗತಿವಾಹಿನಿ ಸುದ್ದಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ನಾಳೆಯಿಂದ ಆರೋಗ್ಯ ಇಲಾಖೆಯ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ನೀಡಿದ್ದ ಕರೆಯನ್ನು ವಾಪಸ್ ಪಡೆದಿದ್ದಾರೆ.

ರಾಜ್ಯ ಸರ್ಕಾರವು 15 ಬೇಡಿಕೆಗಳ ಪೈಕಿ 13 ಬೇಡಿಕೆಗಳನ್ನು ಈಡೇರಿಸುವುದಾಗಿ ಒಪ್ಪಿಗೆ ನೀಡಿರುವ ಹಿನ್ನೆಲೆಯಲ್ಲಿ ವೈದ್ಯ ಸಂಘಟನೆಗಳು ತಮ್ಮ ಮುಷ್ಕರವನ್ನು ತಾತ್ಕಾಲಿಕವಾಗಿ ಹಿಂಪಡೆದುಕೊಂಡಿವೆ. 

ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ನಾಳೆಯಿಂದ ಒಪಿಡಿ ಬಂದ್ ಮಾಡಿ ಸರ್ಕಾರಿ ವೈದ್ಯಾಧಿಕಾರಿಗಳು ಮುಷ್ಕರಕ್ಕೆ ಇಳಿಯುವವರಿದ್ದರು.

ಈ ಹಿನ್ನೆಲೆಯಲ್ಲಿ ವೈದ್ಯಾಧಿಕಾರಿಗಳ ಜೊತೆ ಸಂಧಾನ ಸಭೆ ನಡೆಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದರು. ಈ ಸಂಧಾನ ಸಭೆಯು ಯಶಸ್ವಿಯಾಗಿದ್ದು, ನಾಳಿನ ಮುಷ್ಕರ ವಾಪಸ್ ಪಡೆದಿರುವ ಕುರಿತು ಅಧಿಕೃತ ಘೋಷಣೆಯೊಂದೇ ಬಾಕಿ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.

ಸರ್ಕಾರಿ ಆಸ್ಪತ್ರೆಗಳ ವೈದ್ಯರು, ಸಿಬ್ಬಂದಿ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಮುಷ್ಕರಕ್ಕೆ ಮುಂದಾಗಿದ್ದು, ಸೌಹಾರ್ದಯುತವಾಗಿ ಬಗೆಹರಿಸುವ ಪ್ರಯತ್ನವನ್ನು ಮಾಡಬೇಕು ಎಂಬ ಕೂಗು ಇಂದಿನ ಸದನದ ಕಲಾಪದಲ್ಲೂ ಕೇಳಿಬಂದಿತ್ತು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button