
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಜಿಲ್ಲೆ ಜಿಲ್ಲೆಗಳಲ್ಲಿಯೂ ದುರಂತ ಸಂಭವಿಸುತ್ತಿದೆ. ಇಂದು ಒಂದೇ ದಿನ ಹೃದಯಾಘಾತಕ್ಕೆ ರಾಜ್ಯದಲ್ಲಿ ಮೂವರು ಬಲಿಯಾಗಿದ್ದಾರೆ.
ಚಿತ್ರದುರ್ಗದಲ್ಲಿ ಓರ್ವರು ಹಾಗೂ ಹಾವೇರಿಯಲ್ಲಿ ಇಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಚಂದ್ರಶೇಖರ್, ಬಸಪ್ಪ ಹಾಗೂ ಕಂಪ್ಲೇಶ್ ಹೃದಯಾಘಾತದಿಂದ ಮೃತಪಟ್ಟವರು.
ಇನ್ನು ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಮುಂದುವರೆದಿದೆ. ಜಿಲ್ಲೆಯಲ್ಲಿ ಕಳೆದ 40 ದಿನಗಳಲ್ಲಿ 38 ಜನರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.