
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚುತ್ತಿದ್ದು, ಕೋವಿಡ್ ಲಸಿಕೆ ಕಾರಣವಿರಬಹುದೇ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸ್ಪಷ್ಟನೆ ನೀಡಿರುವ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೋವಿಡ್ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ ಎಂದು ತಿಳಿಸಿದ್ದಾರೆ.
ಆರೋಗ್ಯ ಇಲಾಖೆ ತಜ್ಞರ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಕೊರೊನಾ ಲಸಿಕೆಯಿಂದ ಹೃದಯಾಘಾತ ಸಂಭವಿಸುತ್ತಿಲ್ಲ. ಕೋವಿಡ್ ಲಸಿಕೆಯಿಂದ ಜನರಿಗೆ ಒಳ್ಳೆಯದಾಗಿದೆ. ಯಾವುದೇ ತೊಂದರೆಯಾಗಿಲ್ಲ ಎಂದಿದ್ದಾರೆ.
ಹೃದಯಾಘಾತಕ್ಕೆ ಜನರ ಜೀವನ ಶೈಲಿಯೇ ಮುಖ್ಯಕಾರಣ ಎಂದು ಹೇಳಿದರು. ಇನ್ನು ಹೃದಯಾಘಾತವನ್ನು ಇನ್ಮುಂದೆ ಸಡನ್ ಡೆತ್ ಅಧಿಸೂಚಿತ ಕಾಯಿಲೆ ಎಂದು ಘೋಷಿಸಲಾಗುವುದು. ಹೃದಯಾಘಾತದಿಂದ ಸಾವನ್ನಪ್ಪಿದರೆ ಅಥವಾ ಏಕಾಏಕಿ ಮೃತಪಟ್ಟರೆ ಮರಣೋತ್ತರ ಪರೀಕ್ಷೆ ಕಡ್ಡಾಯ ಎಂದು ಹೇಳಿದರು.