
ಪ್ರಗತಿವಾಹಿನಿ ಸುದ್ದಿ: ರೈತರ ಪ್ರತಿಭಟನೆಯಲ್ಲಿ ಭಾಗಿಯಾಗಲೆಂದು ಬೆಂಗಳೂರಿಗೆ ಬಂದಿದ್ದ ರೈತ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈಶ್ವರ್ (50) ಮೃತ ರೈತ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಕುರುಬರಹುಂಡಿ ಗ್ರಾಮದ ರೈತ ಬೆಂಗಳೂರಿಗೆ ಬಂದಿದ್ದರು. ಫ್ರೀಡಂ ಪಾರ್ಕ್ ನಲ್ಲಿ ನಡೆಯುತ್ತಿರುವ ರೈತರ ಧರಣಿಯಲ್ಲಿ ಭಾಗಿಯಾಗಲೆಂಡು ಮೆಜೆಸ್ಟಿಕ್ ರೈಲು ನಿಲ್ದಾಣದಲ್ಲಿ ಇಳಿದು, ಫ್ರೀಡಂ ಪಾರ್ಕ್ ನತ್ತ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಕುಸಿದು ಬಿದ್ದಿದ್ದಾರೆ.
ಈ ವೇಳೆ ಸ್ಥಳದಲ್ಲಿದ್ದ ಪೊಲೀಸರು ಸಿಪಿಆರ್ ಮಾಡಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಅಷ್ಟರಲ್ಲೇ ರೈತ ಈಶ್ವರ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.