
ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಸಣ್ಣ ವಯಸ್ಸಿನವರೂ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಕಡ್ಡಾಯ ಹೃದಯ ತಪಾಸಣೆಗೆ ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.
ಹಾಸನ ಜಿಲ್ಲೆಯಲ್ಲಿ ಸಭೆ ನಡೆಸಿದ ಬಳಿಕ ಮಾತನಾಡಿದ ಸಹಕಾರ ಸಚಿವ ಕೆ.ಎನ್.ರಾಜಣ್ಣ, ಹಾಸನ ಜಿಲ್ಲೆಯಲ್ಲಿ ಹೃದಯಾಘಾತದಿಂದ ಸಣ್ಣ ಸಣ್ಣವರೂ ಸಾವನ್ನಪ್ಪುತ್ತಿದ್ದಾರೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಹೃದಯಾಘಾತದಿಂದ ಸಾವು ಸಂಭವಿಸುತ್ತಿದೆ. ಈ ಘಟನೆ ತಪ್ಪಿಸುವ ನಿಟ್ಟಿನಲ್ಲಿ ಕಡ್ಡಾಯವಾಗಿ ಹೃದಯ ತಪಾಸಣೆ ನಡೆಸಲು ಸರ್ಕಾರ ಚಿಂತನೆ ನಡೆಸಿದೆ ಎಂದರು.
ಚಿಕ್ಕ ಮಕ್ಕಳಿಂದ ಹಿಡಿದು ಹಿರಿಯಯರವರೆಗೂ ಹೃದಯ ತಪಾಸಣೆ ಕಡ್ಡಾಯ ಮಾಡುವ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂ ರಾವ್ ಜೊತೆ ಮಾತನಾಡುತ್ತೇನೆ ಎಂದರು.
ಹಾಸನದಲ್ಲಿ ಹೈಸ್ಕೂಲು ಮಕ್ಕಳಿಗೆ 15 ದಿನಗಳೊಳಗೆ ಹೃದಯ ತಪಾಸಣೆ ನಡೆಸಬೇಕು. ಶಾಲೆಗಳಲ್ಲಿ ಎಲ್ಲಾ ಮಕ್ಕಳಿಗೂ ಹೃದಯ ತಪಾಸಣೆ ನಡೆಸಬೇಕು ಎಂದು ಸೂಚಿಸಿದರು. ಹಾಸನದಲ್ಲಿ ಒಬ್ಬರೇ ಹೃದಯ ತಜ್ಞರಿದ್ದಾರೆ. ಇನ್ನೂ 2-3 ಹೃದ್ರೋಗ ತಜ್ಞರ ನೇಮಕ ಮಾಡಲು ಮನವಿ ಮಾಡಲಾಗುವುದು ಎಂದರು.