Belagavi NewsBelgaum NewsKarnataka News

*ಮುಂದಿನ ಐದು ದಿನ ವ್ಯಾಪಕ ಮಳೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ವರುಣ ಸತತವಾಗಿ ಸುರಿಯುತ್ತಿದ್ದು, ಮತ್ತೆ ಮುಂದಿನ 5 ದಿನ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾನ ಇಲಾಖೆ ಮಾಹಿತಿ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ ಎಂದು ಈ ಬಗ್ಗೆ ಹವಾಮಾನ ಇಲಾಖೆಯು ಮುನ್ಸೂಚನೆ ಕೊಟ್ಟಿದೆ.

Home add -Advt

ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಿದೆ.

ಧಾರವಾಡ, ಬೆಳಗಾವಿ, ಹಾವೇರಿ, ತುಮಕೂರು, ಮಂಡ್ಯ ಚಿತ್ರದುರ್ಗ, ಯಾದಗಿರಿ, ರಾಯಚೂರು, ಕಲಬುರಗಿ, ಬೀದರ್ ಜಿಲ್ಲೆಗೆ ಯಲ್ಲೋ ಅಲರ್ಟ್ ಹಾಗೂ ಉಡುಪಿ, ದಾವಣಗೆರೆ, ಮೈಸೂರು ಜಿಲ್ಲೆಗೆ ಆರೆಂಜ್ ಅಲರ್ಟ್  ಘೋಷಿಸಲಾಗಿದೆ

ಕಳೆದ ಒಂದು ವಾರದಿಂದ ಎಡಬಿಡದೆ ರಾಜ್ಯದ ಕರಾವಳಿ, ಮಲೆನಾಡು ಭಾಗದಲ್ಲಿ ಮಳೆಯಾಗುತ್ತಿದ್ದು ಮಳೆಯ ಜೊತೆಗೆ ಚಳಿಗಾಳಿ ಬೀಸುತ್ತಿದೆ. ಜನ ಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

Related Articles

Back to top button