Kannada NewsKarnataka News

*ಹಠಾತ್ ಹೃದಯಾಘಾತ: ಪದವಿ ವಿದ್ಯಾರ್ಥಿನಿ ಸಾವು*

ಪ್ರಗತಿವಾಹಿನಿ ಸುದ್ದಿ: ಪದವಿ ವಿದ್ಯಾರ್ಥಿನಿಯೊಬ್ಬರು ಹಠಾತ್ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಹಾಸನ ಮೂಲದ ಸುಪ್ರಿಯಾ ಹೃದಯಾಘಾತಕ್ಕೆ ಬಲಿಯಾದ ವಿದ್ಯಾರ್ಥಿನಿ. ಹಾಸನದ ಹೊಳೆನರಸೀಪುರ ತಾಲೂಕಿನ ಕಟ್ಟಳ್ಳಿ ಗ್ರಾಮದ ಸುಪ್ರಿಯಾ, ಪದವಿ ವ್ಯಾಸಂಗಕ್ಕಾಗಿ ಬೆಂಗಳೂರಿನ ಬ್ಯಾಟರಾಯನಪುರದಲ್ಲಿ ವಾಸವಾಗಿದ್ದರು. ಇದ್ದಕ್ಕಿದ್ದಂತೆ ಕುಸಿದು ಬಿದ್ದ ಸುಪ್ರಿಯಾಳನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅಷ್ಟರಲ್ಲೇ ಅವರು ಹೃದಯಾಘಾತದಿಂದ ಸಾವನ್ನಪ್ಪಿದ್ದರು.

ಈ ಮೂಲಕ ಹೃದಯಾಅಘಾತಕ್ಕೆ ಸಾವನ್ನಪ್ಪಿದವರ ಹಾಸನ ಮೂಲದವರ ಸಂಖ್ಯೆ 14ಕ್ಕೆ ಏರಿಕೆಯಾದಂತಾಗಿದೆ. ಇತ್ತೀಚಿನ ದಿನಗಳಲ್ಲಿ ಯುವಕ-ಯುವತಿಯರು ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಸಂಖ್ಯೆ ಹೆಚ್ಚುತ್ತಿದೆ. ಅದರಲ್ಲಿಯೂ ಕಳೆದ ಕೆಲ ತಿಂಗಳಿನಲ್ಲಿ ಹಾಸನ ಜಿಲ್ಲೆಯಲ್ಲಿ ಸಣ್ಣ ವಯಸ್ಸಿನವರು ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button